ಬೆಂಗಳೂರು:ದೆಹಲಿಯ ತಬ್ಲಿಘಿ ಜಮಾತ್​ನಲ್ಲಿ ವಿದೇಶಿಯರೂ ಭಾಗವಹಿಸಿರುವುದರಿಂದ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಸಮಾವೇಶದಿಂದ ರಾಜ್ಯಕ್ಕೆ ಹಿಂದಿರುಗಿರುವವರನ್ನು ತ್ವರಿತವಾಗಿ ಪತ್ತೆ ಹಚ್ಚಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕರೊನಾ ಸೋಂಕು ಹರಡುವ ಅಪಾಯದ ಹಿನ್ನೆಲೆಯಲ್ಲಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ವ್ಯಕ್ತಿಗಳನ್ನು ಪತ್ತೆ ಹೆಚ್ಚಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ವಕೀಲೆ ಗೀತಾ ಮಿಶ್ರಾ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
ಏ.3ರಂದು ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಸೂಕ್ತ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಮಂಗಳವಾರ ಅರ್ಜಿ ವಿಚಾರಣೆ ವೇಳೆ ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ವರದಿ ಸಲ್ಲಿಸಿದರು. ಅದನ್ನು ಪರಿಶೀಲಿಸಿದ ಪೀಠ, ಸರ್ಕಾರ ಒದಗಿಸಿರುವ ಮಾಹಿತಿ ಸೂಕ್ತವಾಗಿಲ್ಲ. ಸಮಾವೇಶದಲ್ಲಿ ಪಾಲ್ಗೊಂಡಿದ್ದವರು ಸದ್ಯ ನೆಲೆಸಿರುವ ಪ್ರದೇಶ ಮತ್ತಿತರ ಅಂಶಗಳ ಸಹಿತ ಪತ್ತೆ ಹಚ್ಚಿ, ಏ.9ರಂದು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಒಬ್ಬ ಸೋಂಕಿತನಿಂದ 30 ದಿನದಲ್ಲಿ 406 ಜನರಿಗೆ ಹಬ್ಬುತ್ತೆ ಕರೊನಾ, ಲಾಕ್​ಡೌನ್​ ಬೇಕಾ ಬೇಡವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
