ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪ್ರಕರಣದ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಸೆಪ್ಟೆಂಬರ್​ 09ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಹತ್ಯೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ಆರೋಪಿಗಳಾದ ನಟ ದರ್ಶನ್​ ಹಾಗೂ ಸಹಚರರು 75 ದಿನಗಳಿಗೂ ಅಧಿಕ ಕಾಲ ಜೈಲಿನಲ್ಲಿದ್ದು, ಇದೀಗ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:VIDEO| ಒನ್​ವೇನಲ್ಲಿ ಬಂದು ಉದ್ಧಟತನ ಮೆರೆದ ದ್ವಿಚಕ್ರ ಸವಾರ; ಯೋಧನ ಕಾರ್ಯಕ್ಕೆ ಹರಿಯುತ್ತಿದೆ ಮೆಚ್ಚುಗೆಯ ಮಹಾಪೂರ
ಈ ಹಿಂದೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಜೈಲಿನಲ್ಲಿರುವ ನಟ ದರ್ಶನ್ ಸೇರಿ ಹಲವು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್​ 09ರ ತನಕ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ನಟ ದರ್ಶನ್​ ಅವರ ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಕಮೆಂಟ್​ ಮಾಡಿ ಮೆಸ್ಸೇಜ್​ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ನಟ ದರ್ಶನ್​ ಮತ್ತು ಸಹಚರರು ಜೂನ್​ 08ರಂದು ಪಟ್ಟಣಗೆರೆಯ ಶೆಡ್​ನಲ್ಲಿ ಭೀಕರವಾಗಿ ಹತ್ಯೆ ಮಾಡಿದ್ದರು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬಳಿ ಇರುವ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದರು. ರಾಜಕಾಲುವೆಯಲ್ಲಿ ಸಿಕ್ಕ ಮೃತದೇಹದ ಜಾಡನ್ನು ಹಿಡಿದು ಹೊರಟ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಹಲವರನ್ನು ಪೊಲೀಸರು ಬಂಧಿಸಿದ್ದರು. ದರ್ಶನ್ ಮತ್ತು ಇತರೆ ಆರೋಪಿಗಳು ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟು ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಆದರೆ ಪ್ರಕರಣದ ಸ್ವರೂಪ ಗಂಭೀರವಾಗಿರುವ ಕಾರಣ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ. ಕನಿಷ್ಟ ಇನ್ನೂ ಒಂದು ಗರಿಷ್ಠ ಆರು ತಿಂಗಳುಗಳ ಕಾಲ ದರ್ಶನ್​ಗೆ ಜಾಮೀನು ಸಿಗುವುದಿಲ್ಲ ಎಂದು ಕೆಲವು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
