ಬೆಂಗಳೂರು:ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರಂ ತಹಶೀಲ್ದಾರ್​ ಅಜಿತ್​ ಕುಮಾರ್ ರೈಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ಮಾಡುವಂತೆ ಕೋರಿ ಸಿಟಿ ಸಿವಿಲ್​ ಕೋರ್ಟ್​ಗೆ ಅಜಿತ್​ ಕುಮಾರ್​ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಧಾಕೃಷ್ಣ ಅವರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಇದನ್ನೂ ಓದಿ:ಪ್ರಿಯಾಂಕ ಗಾಂಧಿ ವಾರಣಾಸಿಯಿಂದ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ: ಸಂಜಯ್​ ರಾವುತ್​
ಅಜಿತ್​ ಕುಮಾರ್​ ರೈ ಈ ಹಿಂದೆ ಜಾಮೀನು ಮಂಜೂರು ಮಾಡುವಂತೆ ಕೋರಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅಜಿತ್​ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿ ತನಿಖಾ ತಂಡದ ವಶಕ್ಕೆ ನೀಡಿತ್ತು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕೆ.ಆರ್. ಪುರಂ ತಹಶೀಲ್ದಾರ್​ ಅಜಿತ್​ ಕುಮಾರ್​ ರೈ ಅವರ ಮನೆ ಮೇಲೆ ದಾಳಿ ಮಾಡಿತ್ತು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಜೂನ್​ 29ರಂದು ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
