ಬೆಂಗಳೂರು:2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ; ಪಶ್ಚಿಮ ಬಂಗಾಳದಲ್ಲಿ EVM, VVPAt ಅನ್ನು ಚರಂಡಿಗೆ ಎಸೆದ ದುಷ್ಕರ್ಮಿಗಳು
2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಭ್ರಷ್ಟಾಚಾರ ಆರೋಪವನ್ನು ಮಾಡಿತ್ತು.  ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿತ್ತು.
ಸಿಎಂ-ಡಿಸಿಎಂ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ವಾದ ಮಂಡಿಸಿದರು. ಬಿಜೆಪಿ ಪರ ವಕೀಲ ವಿನೋದ್​ ಕುಮಾರ್​ ವಾದ ಮಂಡಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಸಿಎಂ-ಡಿಸಿಎಂಗೆ ಜಾಮೀನು ಮಂಜೂರು ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
