ಬೆಂಗಳೂರು:ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​​ ಕೇಸ್​ ವಿಚಾರವಾಗಿ ಭವಾನಿ ರೇವಣ್ಣಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ನೀಡಿದೆ.
ಭವಾನಿ ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಚಿತ್ರಕ್ಕೆ ನಿಷೇಧ ಹೇರಿದ ಕರ್ನಾಟಕ ಸರ್ಕಾರ
ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ಹೆಚ್​ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಇದರ ಜೊತೆಗೆ ಭವಾನಿ ರೇವಣ್ಣ ಕಾರು ಚಾಲಕ ಚೇತನ್​ರನ್ನು ಎಸ್​ಐಟಿ ಬಂಧಿಸಿದೆ.
ಭವಾನಿ ರೇವಣ್ಣಗೆ ಎಸ್​ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದರು. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಹೊಳೆನರಸೀಪುರದಲ್ಲಿರುವ ಭವಾನಿ ರೇವಣ್ಣ ನಿವಾಸ ಖಾಲಿಯಾಗಿದೆ. ಬಂಧನದ ಭೀತಿಯಿಂದ ಭವಾನಿ 15 ದಿನಗಳ ಹಿಂದೆಯೇ ಮನೆ ತೊರೆದಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಕೆಲಸದವರು ಮಾತ್ರ ಇದ್ದಾರೆ. ಹೀಗಾಗಿ ಭವಾನಿ ಮೊಬೈಲ್ಅನ್ನು ಟ್ರೇಸ್​ ಮಾಡಲಾಗುತ್ತಿದ್ದು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಸಂಪರ್ಕಿಸಲು ಎಸ್​ಐಟಿ ಅಧಿಕಾರಿಗಳು ಯತ್ನಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − one =
Remember me
