ಬೆಂಗಳೂರು:ಪಿಯು ಕಾಲೇಜುಗಳಲ್ಲಿ 1,203 ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿರುವ ಹೈಕೋರ್ಟ್, ಪ್ರಕ್ರಿಯೆ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.
ಉಪನ್ಯಾಸಕರ ಹುದ್ದೆಗೆ ಕೆಇಎ ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿ ರದ್ದುಪಡಿಸಲು ಕೋರಿ ಉದ್ಯೋಗ ವಂಚಿತ ಅಭ್ಯರ್ಥಿಗಳು 2019ರ ಡಿ.20ರಂದು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ನೇತೃತ್ವದ ವಿಭಾಗೀಯ ಪೀಠ, ಆಯ್ಕೆ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರ ಮತ್ತು ಕೆಇಎಗೆ ನೋಟಿಸ್ ಜಾರಿಗೊಳಿಸಿತ್ತು.
ಮಂಗಳವಾರ ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ರಾಜ್ಯದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇದ್ದು, ತುರ್ತು ನೇಮಕ ಅಗತ್ಯವಿದೆ. ಅಭ್ಯರ್ಥಿಗಳ ಆಯ್ಕೆಗೆ ಪರೀಕ್ಷೆ ಮುಗಿದಿದ್ದು, ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮಧ್ಯಂತರ ತಡೆ ನೀಡಿರುವುದರಿಂದ ಇಡೀ ನೇಮಕಾತಿ ಪ್ರಕ್ರಿಯೆಗೆ ತೊಂದರೆ ಆಗಲಿದೆ. ಆದ್ದರಿಂದ, ಮಧ್ಯಂತರ ಆದೇಶ ತೆರವು ಮಾಡಬೇಕೆಂದು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠ, ಮಧ್ಯಂತರ ಆದೇಶ ಮಾರ್ಪಾಡುಗೊಳಿಸಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿತು. ಆದರೆ, ಪ್ರಕ್ರಿಯೆಯು ಅರ್ಜಿ ಸಂಬಂಧ ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
