ಬೆಂಗಳೂರು:ಹಿಂದು ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿ ನಟ ಚೇತನ್ ಮಾ.21ರಂದು ಬಂಧನವಾಗಿದ್ದರು. ಬಳಿಕ 32ನೇ ಎಸಿಎಮ್​ಎಮ್​ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು.
ಇದೀಗ ನಟ ಚೇತನ್​ಗೆ 32 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ. ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೆ.ಲತಾ ಅವರು ಆದೇಶ ನೀಡಿದ್ದಾರೆ. ಆದೇಶದಲ್ಲಿ 25 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡಲು ಸೂಚನೆ ನೀಡಲಾಗಿದೆ.ಇದನ್ನೂ ಓದಿ:ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಹತ್ಯೆ!
ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ್ದ ದೂರಿನ ಮೇಲೆ ನಟ ಚೇತನ್ ಬಂಧನವಾಗಿತ್ತು. ಶೇಷಾದ್ರಿಪುರಂ ಠಾಣೆ ಪೊಲೀಸರು ಐಪಿಸಿ 295A, 505B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ನಟ ಚೇತನ್ ತಮ್ಮ ಫೇಸ್​ಬುಕ್​ನಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಬರೆದುಕೊಂಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂಬುದು ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂದು ನಂಬಿರುವುದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದಾಗಿದೆ ಎಂದು ಬರೆದುಕೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fifteen =
Remember me
