ಬೆಂಗಳೂರು:ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ್​ ಬೊಮ್ಮಾಯಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದೆ.
ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಸಂಸದ ಬಸವರಾಜ್​ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:VIDEO| ರಸ್ತೆಗುಂಡಿ ಪರಿಶೀಲಿಸಿದ ಯಮಧರ್ಮ; ಪ್ರೇತಗಳಿಗೆ ನೀಡಿದ ಶಿಕ್ಷೆ ಏನು ಗೊತ್ತಾ?
ಕರಣದ ಪ್ರತಿವಾದಿಗಳು ಮತ್ತು ಅವರಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿಗಳು ದಾವೆಯ ಮುಂದಿನ ವಿಚಾರಣೆಯವರೆಗೆ ದೂರುದಾರ ಬಸವರಾಜ ಬೊಮ್ಮಾಯಿ ಅವರ ಮಾನಹಾನಿಯುಂಟು ಮಾಡುವ ಯಾವುದೇ ಸುದ್ದಿಗಳನ್ನು ಪ್ರಸಾರ, ಪ್ರಕಟ ಮತ್ತು ಹಂಚಿಕೆ ಮಾಡಬಾರದು. ಬೊಮ್ಮಾಯಿ ಅವರ ಮಾನಹಾನಿ ಆಗುವಂತಹ ಅಂಶಗಳನ್ನೊಳಗೊಂಡ ಎರಡು ಪೋಸ್ಟ್‌ಗಳನ್ನು 24 ಗಂಟೆ ಒಳಗೆ ಅಳಿಸಿಹಾಕಬೇಕು ಎಂದು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.
ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಮತ್ತು ಸಮನ್ಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟಂಬರ್ 09ಕ್ಕೆ ಮುಂದೂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
