ಬೆಂಗಳೂರು:ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​​ ಕೇಸ್​ ವಿಚಾರವಾಗಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದ್ದು, ಎಚ್​ಡಿ ರೇವಣ್ಣ ಕುಟುಂಬಕ್ಕೆ ಇಂದು ಡಬಲ್ ಶಾಕ್​ ಆಗಿದೆ.
ಇದನ್ನೂ ಓದಿ:ಈತ SSLC ಪರೀಕ್ಷೆ ಪಾಸ್​ ಮಾಡಿದ್ದೆ ರಣರೋಚಕ; ಡೋಲು ಬಾರಿಸಿ ಕುಣಿದು ಕುಪ್ಪಳಿಸಿದ ಗ್ರಾಮಸ್ಥರು
ಮೈಸೂರಿನ ಕೆಆರ್​ ಪೇಟೆಯಲ್ಲಿ ದಾಖಲಾಗಿರುವ ಕಿಡ್ನ್ಯಾಪ್ ಕೇಸ್​ನಲ್ಲಿ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ  ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಮೇ 31ರಂದು ತೀರ್ಪು ನೀಡುವುದಾಗಿ ಆದೇಶ ಕಾಯ್ದಿರಿಸಿತ್ತು. ಇದೀಗ ಕೋರ್ಟ್ ​ಭವಾನಿ ರೇವಣ್ಣ ಅವರಿಗೆ ಜಾಮೀನು ತಿರಸ್ಕರಿಸಿದೆ.
ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕಕ್ಕೂ ಸಿಕ್ಕಿಲ್ಲ. ಮೇ 04 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 06ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.ಆ ನಂತರ, ಅಂದರೆ ಮೇ 08 ರಿಂದ ಯಾರ ಸಂಪರ್ಕಕಕ್ಕೂ ಸಿಕ್ಕಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
