ಬೆಂಗಳೂರು:ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್​ ರೇವಣ್ಣ ಪರ ವಕೀಲ ಅರುಣ್​ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ:IMDb ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗರು; ಎಷ್ಟನೇ ಸ್ಥಾನ ಗೊತ್ತಾ?
ಅಧಿಕೃತ ಮೂಲಗಳ ಪ್ರಕಾರ, ಪ್ರಜ್ವಲ್ ಅವರು ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆದ ಏಪ್ರಿಲ್ 26ರಂದು ಪ್ರಜ್ವಲ್ ಮತದಾನ ಮಾಡಿ ವಿದೇಶಕ್ಕೆ ಹಾರಿದ್ದರು. ಬಳಿಕ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೋಗಳು ಭಾರಿ ಸದ್ದು ಮಾಡಿದ್ದವು. ಇದೇ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡ ಬಂಧನಕ್ಕೀಡಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೂ ಬಂಧನ ಭೀತಿ ಇದ್ದು 31ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − twelve =
Remember me
