ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳು ನಡೆಯದ ಪರಿಣಾಮ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್​ಗಳಿಗೆ ಪ್ರತ್ಯೇಕವಾಗಿ ಪರಿಹಾರ ನೀಡಲು ಸಾಧ್ಯವಾಗದಿರುವುದಕ್ಕೆ ಕಾರಣ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್​ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.
ವಿಚಾರಣೆ ವೇಳೆ ಕರ್ನಾಟಕ ವಕೀಲರ ಪರಿಷತ್ ಪರ ವಕೀಲರು ವಾದ ಮಂಡಿಸಿ, ಸಂಕಷ್ಟದಲ್ಲಿರುವ ವಕೀಲರಿಗೆ ಆರ್ಥಿಕ ನೆರವು ಕಲ್ಪಿಸಲು ಸರ್ಕಾರ ಪರಿಷತ್​ಗೆ 5 ಕೋಟಿ ಅನುದಾನ ನೀಡಿದೆ. ಆ ಹಣ ವಕೀಲರಿಗೆ ವಿತರಿಸಲು ಕೋವಿಡ್-19 ವಕೀಲರ ಪರಿಹಾರ ನಿಧಿ ರೂಪಿಸಲಾಗಿದೆ. ಪರಿಹಾರಕ್ಕಾಗಿ ವಕೀಲರಿಂದ 4,300 ಅರ್ಜಿಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಪರಿಹಾರ ವಿತರಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನೂ ಓದಿ:ಸ್ಯಾಂಡಲ್​​ವುಡ್​ ಮಾದಕ ವ್ಯಸನಿಗಳ ಹೆಸರು ಹೇಳಿದ್ದ ಇಂದ್ರಜಿತ್​ ಲಂಕೇಶ್​ಗೆ ಸಿಸಿಬಿ ನೋಟಿಸ್…
ಸರ್ಕಾರ ನೀಡಿದ 5 ಕೋಟಿ ಹಣದಲ್ಲಿಯೇ ವಕೀಲರ ಗುಮಾಸ್ತರಿಗೂ ಪರಿಹಾರ ಕಲ್ಪಿಸಲು ತಿಳಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರಿಷತ್​ಗೆ ಪತ್ರ ಬರೆದಿದ್ದಾರೆ. ಆದರೆ, ಆ ಹಣದಲ್ಲಿ ವಕೀಲರಿಗೆ ಹಾಗೂ ಗುಮಾಸ್ತರಿಗೆ ಎಷ್ಟು ಹಣ ಉಪಯೋಗಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆ ಸ್ಪಷ್ಟತೆಯನ್ನು ಸರ್ಕಾರವೇ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಸದಸ್ಯ ಕಾರ್ಯದರ್ಶಿ ಸ್ಥಾನಕ್ಕೆ ಒಬ್ಬರನ್ನು ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ನ್ಯಾಯಪೀಠ ಪ್ರತಿಕ್ರಿಯಿಸಿ, ಗುಮಾಸ್ತರಿಗೆ ಪ್ರತ್ಯೇಕವಾಗಿ ಪರಿಹಾರ ಕಲ್ಪಿಸಲು ಹೈಕೋರ್ಟ್ ಹೊರಡಿಸಿರುವ ಸೂಚನೆಗಳನ್ನು ಏಕೆ ಪಾಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಕಾರಣ ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿತು. ಜತೆಗೆ, ಕೋವಿಡ್-19 ವಕೀಲರ ಪರಿಹಾರ ನಿಧಿ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ವಕೀಲರ ಪರಿಷತ್​ಗೆ ಸೂಚಿಸಿ ಸೆ.7ಕ್ಕೆ ವಿಚಾರಣೆ ಮುಂದೂಡಿತು.
ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ಇರಲ್ಲ, ವಾರಾಂತ್ಯದ ರಜೆಯೂ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + six =
Remember me
