ಶಿವಮೊಗ್ಗ: ಕರೊನಾ ವೈರಸ್ ಸೋಂಕು ತಗುಲಿ ಭದ್ರಾವತಿಯ ಮಾಜಿ ಶಾಸಕ ಜೆಡಿಎಸ್ ನಾಯಕ ಎಂ.ಜೆ.ಅಪ್ಪಾಜಿ ಗೌಡ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಎರಡು ದಿನಗಳ ಹಿಂದೆ ಅವರನ್ನು ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಕೋವಿಡ್ -19 ಟೆಸ್ಟ್ ಪಾಸಿಟಿವ್ ಬಂದಿತ್ತು. ಇದು ಅವರ ವೈದ್ಯಕೀಯ ವರದಿಯಲ್ಲಿ ದಾಖಲಾಗಿದೆ. ಈ ಹಿಂದೆ ಅಪ್ಪಾಜಿ ಗೌಡ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆಗೆ ಕೂಡ ಒಳಗಾಗಿದ್ದರು.
ಇದನ್ನೂ ಓದಿ:ರಾಜ್ಯ ಬೊಕ್ಕಸಕ್ಕೆ ಸುಮಾರು 5,000 ಕೋಟಿ ರೂ. ಹೊರೆ
ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಶಾಸಕರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲು ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೆ, ಅಪ್ಪಾಜಿ ಗೌಡ ಅವರ ನಿಧನ ನಾಡಿಗೆ, ಜೆಡಿಎಸ್​ಗೆ ತುಂಬಲಾರದ ನಷ್ಟವಾಗಿದೆ. ಅವರು ಭದ್ರಾವತಿಯ ಕಾರ್ಖಾನೆಗಳ ಕಾರ್ಮಿಕರ ಧ್ವನಿಯಾಗಿದ್ದರು ಎಂದೂ ಅವರ ಸಂಘಟನಾ ಶಕ್ತಿಯನ್ನು ಸ್ಮರಿಸಿಕೊಂಡಿದ್ದಾರೆ.
ಕೀರ್ತಿ ಸುರೇಶ್​ ಈಗ ನಿರ್ಮಾಪಕಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × four =
Remember me
