ಬೆಂಗಳೂರು: ಕರೊನಾ ನಿರ್ವಹಣೆಗೆ ಆಡಳಿತ ಯಂತ್ರವನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಉಪನ್ಯಾಸಕರು, ಭೂವಿಜ್ಞಾನಿಗಳು, ಆರ್​ಎಫ್​ಒ, ಇಂಜಿನಿಯರ್​ಗಳನ್ನೂ ವಿವಿಧ ಚಟುವಟಿಕೆಯಲ್ಲಿ ತಕ್ಷಣದಿಂದಲೇ ತೊಡಗಿಸಿಕೊಳ್ಳಲು ತೀರ್ವನಿಸಿ ಆದೇಶ ಹೊರಡಿಸಿದೆ.
ಸೋಂಕು ಹರಡುವಿಕೆ ನಿಯಂತ್ರಿಸಲು ಸಂಪರ್ಕ ಪತ್ತೆ ಹಚ್ಚುವ ಕಾರ್ಯ ಅತಿ ಪ್ರಮುಖವಾಗಿದ್ದು, ಈ ಕಾರ್ಯಕ್ಕೆ ಹೆಚ್ಚಿನ ಮಾನವಸಂಪನ್ಮೂಲದ ಅಗತ್ಯವಿದೆ. ಹೀಗಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 24(ಇ) (ಎಫ್) ಮತ್ತು (ಎಲ್) ಅಡಿಯಲ್ಲಿ ಪ್ರದತ್ತ ಅಧಿಕಾರ ಚಲಾಯಿಸಿ ಸರ್ಕಾರದ ವಿವಿಧ ಇಲಾಖೆಗಳ ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಧಿಕಾರಿ, ನೌಕರರನ್ನು ಸಂಪರ್ಕ ಪತ್ತೆ ಕಾರ್ಯಕ್ಕೆ ನೇಮಿಸಿದ್ದಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಅಕ್ಷಯ್​ ಕುಮಾರ್​ಗೂ ಎದುರಾಗಿತ್ತು ನೆಪೋಟಿಸಂ; ಸಿನಿಮಾ ಅವಕಾಶ ಕಿತ್ತುಕೊಂಡಿದ್ದರು ಈ ಸ್ಟಾರ್ ನಟ!
ಮೊದಲ ಹಂತದಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ಆದ್ಯತೆ ನೀಡಿ ಆದೇಶ ಹೊರಡಿಸಿದ್ದು, ವಿವಿಧ ಇಲಾಖೆಗಳ 1246 ನೌಕರ ಅಧಿಕಾರಿಗಳನ್ನು ಪಟ್ಟಿ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿ ಮಂಜುಳಾ ಸಂಪರ್ಕ ಪತ್ತೆ ತಂಡದ ನಾಯಕರಾಗಿದ್ದು, 1246 ಮಂದಿಗೆ ತಕ್ಷಣ ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಈ ನೌಕರರು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಇಲಾಖೆಗಳು ನಿಗದಿಪಡಿಸುವ ಸಾಮಾನ್ಯ ಕರ್ತವ್ಯಗಳ ಜತೆ ಹೆಚ್ಚುವರಿಯಾಗಿ ಕೋವಿಡ್ 19 ಸಂಪರ್ಕ ಪತ್ತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಒಂದೊಮ್ಮೆ ಈ ಆದೇಶ ಪಾಲಿಸುವಲ್ಲಿ ಅವಿಧೇಯತೆ ತೋರಿಸಿದಲ್ಲಿ ಕಾನೂನು ಪ್ರಕಾರ ಶಿಕ್ಷೆಗೆ ಒಳಡಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ನಿಯಮದ ಪ್ರಕಾರ ಜೈಲು ಶಿಕ್ಷೆ, ದಂಡ ವಿಧಿಸಬಹುದು. ಈ ಜವಾಬ್ದಾರಿಗೆ ನಿಗದಿಯಾದವರು ಬೇರೆ ಮಹತ್ವದ ಜವಾಬ್ದಾರಿ ಹೊಂದಿರುವ ಸಂಬಂಧ ತಮ್ಮ ಮೇಲಧಿಕಾರಿಯಿಂದ ಲಿಖಿತ ಅನುಮತಿ ಪಡೆದರಷ್ಟೇ ವಿನಾಯಿತಿ ಸಿಗಲಿದೆ. ಇದರ ಹೊರತು ಕರ್ತವ್ಯಕ್ಕೆ ಅನಿವಾರ್ಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ. ಸದ್ಯಕ್ಕೆ ಪಶುಸಂಗೋಪನೆ, ಮೀನುಗಾರಿಕೆ, ಕೃಷಿ, ತೋಟಗಾರಿಕೆ, ಸಹಕಾರ, ಗಣಿ ಮತ್ತು ಭೂ ವಿಜ್ಞಾನ, ಕಾಲೇಜು ಶಿಕ್ಷಣ ಇಲಾಖೆಯನ್ನು ಸಂಪರ್ಕ ಪತ್ತೆಗೆ ಬಳಸಿಕೊಳ್ಳಲಾಗುತ್ತಿದೆ.
VIDEO|ಸೈಂಟಿಫಿಕ್ ಫಿಕ್ಷನ್ ಸಿನಿಮಾದ ನಾಯಕಿ: ಈಕೆ ಜಗತ್ತಿನ ಮೊದಲ ಎಐ ಆರ್ಟಿಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
