ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ 537 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದ ಸೋಂಕಿನ ಪ್ರಮಾಣ ದರ ಶೇ. 3.06ಕ್ಕೆ ಏರಿಕೆಯಾಗಿದೆ.
ಸೋಂಕು ಏರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಿನದ ಕೋವಿಡ್ ಪರೀಕ್ಷೆ ಸಂಖ್ಯೆಯನ್ನು 20 ಸಾವಿರಕ್ಕೆ ಹೆಚ್ಚಿಸಲಾಗಿದ್ದು, ನಿಗದಿತ ಗುರಿ ತಲುಪುವ ಮುನ್ನವೇ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.
ಇದನ್ನೂ ಓದಿ:ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಮತ್ತೊಮ್ಮೆ ಶಾಕ್ ನೀಡಿದ ಕೋರ್ಟ್​; ಧಾರವಾಡಕ್ಕೆ ನೋ ಎಂಟ್ರಿ
ಬೆಂಗಳೂರು ನಗರದಲ್ಲಿ ಅತೀ ಹೆಚ್ಚು 367 ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ 30, ಮೈಸೂರು 18, ಬೆಳಗಾವಿ 14, ದಾವಣಗೆರೆ ಮತ್ತು ವಿಜಯನಗರ ತಲಾ 12, ಬಳ್ಳಾರಿ ಮತ್ತು ಕಲಬುರಗಿಯಲ್ಲಿ ತಲಾ 10, ಉತ್ತರ ಕನ್ನಡ 9, ಹಾವೇರಿ 8, ಬೆಂಗಳೂರು ಗ್ರಾಮಾಂತರ 7, ಚಿಕ್ಕಮಗಳುರು 6, ಹಾಸನ 5, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಯಚೂರು ಮತ್ತು ತುಮಕೂರಿನಲ್ಲಿ ತಲಾ 4, ಚಾಮರಾಜನಗರ 3, ಬಾಗಲಕೋಟೆ, ಬೀದರ್, ಧಾರವಾಡ, ಕೊಪ್ಪಳ, ಮಂಡ್ಯ ಮತ್ತು ಉಡುಪಿ ತಲಾ ಒಬ್ಬರಂತೆ 537 ಸೋಂಕು ಪ್ರಕರಣಗಳು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 12 =
Remember me
