ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆ ನಡುವಿನ ಅವಧಿಯಲ್ಲಿ ಹೊಸದಾಗಿ 22 ಕೋವಿಡ್​19 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. 223 ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ. ಮರಣ ಪ್ರಮಾಣ 21 ಆಗಿದ್ದು, ಈ ಪೈಕಿ ಒಂದು ಪ್ರಕರಣದಲ್ಲಿ ರೋಗಿ ಕೋವಿಡ್ 19ಯೇತರ ಕಾರಣಕ್ಕೆ ಮೃತಪಟ್ಟಿದ್ದಾರೆ.
ಹೊಸದಾಗಿ ಪತ್ತೆಯಾದ 22 ಪ್ರಕರಣಗಳ ಪೈಕಿ 14 ಪ್ರಕರಣ ಬೆಳಗಾವಿಯದ್ದು. ಮೂರು ಪ್ರಕರಣ ಬೆಂಗಳೂರು ನಗರದಲ್ಲಿ ಪತ್ತೆಯಾಗಿದ್ದು, ಎರಡು ವಿಜಯಪುರ, ತುಮಕೂರು, ದಾವಣಗೆರೆಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.
ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 “ಆಪ್ತಮಿತ್ರ ಆರೋಗ್ಯ ಸಹಾಯವಾಣಿ” ಗೆ ಕರೆಮಾಡಬೇಕು.
ವೈಯಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಿ. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ / ಟಿಶ್ಯೂ ಪೇಪರನ್ನು ಬಳಸಿ, ಕೈ ಸ್ವಚ್ಛಗೊಳಿಸುವ ದ್ರಾವಣ (ಸ್ಯಾನಿಟೈಸರ್) ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವಿಕೆ ಬೇಡ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕಲಬುರಗಿ, ಹುಕ್ಕೇರಿಯ ಮಕ್ಕಳಲ್ಲಿ ಸೋಂಕು ಪತ್ತೆ- ಆತಂಕದಲ್ಲಿ ಜನತೆ 534ಕ್ಕೇರಿದ ಸೋಂಕಿತರ ಸಂಖ್ಯೆ 216 ಮಂದಿ ಬಿಡುಗಡೆ

ಕಲಬುರಗಿಯಲ್ಲಿ ಆರು ಹೊಸ ಸೋಂಕಿತರು: ಸೋಂಕಿನ ಪ್ರಮಾಣ 523ಕ್ಕೆ ಏರಿಕೆ 207 ಮಂದಿ ಬಿಡುಗಡೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
