ಬೆಂಗಳೂರು:ಕರೊನಾ ಸೋಂಕು ತಡೆಗೆ ಲಾಕ್​ಡೌನ್ ಬದಲಿಗೆ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸರು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ನಗರದ ಎಲ್ಲೆಡೆ ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾರೆ.
ವ್ಯಕ್ತಿಗತ ಅಂತರ ಕಾಪಾಡುವುದು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನಗರದೆಲ್ಲೆಡೆ ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಇದೀಗ ದಂಡ ವಿಧಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ವ್ಯಕ್ತಿಗತ ಅಂತರ ಮತ್ತು ಮಾಸ್ಕ್ ಧರಿಸದೆ ಸಾರ್ವಜನಿಕರ ಸ್ಥಳಗಳಲ್ಲಿ ಓಡಾಡಿದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತಿದ್ದಾರೆ. ನಿಯಮ ಪಾಲಿಸದ ವಾಣಿಜ್ಯ ಮಳಿಗೆ, ಕಚೇರಿ, ಅಂಗಡಿಗಳನ್ನು ಬಂದ್ ಮಾಡುವ ನಿರ್ಧಾರಕ್ಕೂ ಬಿಬಿಎಂಪಿ ಅಧಿಕಾರಿಗಳು ಬಂದಿದ್ದಾರೆ.
ಇದನ್ನೂ ಓದಿ:ರಾಜ್ಯರಾಜಧಾನಿಯಲ್ಲಿ ಗುರುವಾರ 889 ಜನರಿಗೆ ಕರೊನಾ ಗುದ್ದು
ಪಶ್ಚಿಮ ವಿಭಾಗದ ಪೊಲೀಸರು ಜೂ. 24 ರಿಂದ ಗುರುವಾರವರೆಗೂ (ಜು.2) ಪುಲಕೇಶಿನಗರ, ಭಾರತಿನಗರ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಜೆ.ಬಿ. ನಗರ, ಬೈಯಪ್ಪನಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ 2,900 ಪ್ರಕರಣಗಳನ್ನು ದಾಖಲಿಸಿ ಒಟ್ಟು 5.8 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಇದನ್ನೂ ಓದಿ:ಪಶ್ಚಿಮ ವಿಭಾಗದಲ್ಲಿ ಹತ್ತು ಠಾಣೆಗಳು ಸೀಲ್​ಡೌನ್
ಡಿಸ್ಚಾರ್ಜ್ ಬಿಡುಗಡೆ ಮಾಹಿತಿ ಅಲಭ್ಯ: ಕರೊನಾ ಸೋಂಕಿತರನ್ನು ಖಾಸಗಿ ಆಸ್ಪತ್ರೆಗಳಿಗೆ ಕಳಿಸುವ ಬಿಬಿಎಂಪಿಗೆ, ಅಲ್ಲಿ ಗುಣಮುಖರಾದವರ ಮಾಹಿತಿ ಸಿಗುತ್ತಿಲ್ಲ. ಇದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕುಮುಕ್ತರ ಸಂಖ್ಯೆ ಅತಿ ಕಡಿಮೆಯಾಗಿ ವರದಿಯಾಗುತ್ತಿದೆ. ಈ ಮಾಹಿತಿ ತಿಳಿದುಕೊಳ್ಳಲು ಮೂವರು ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ.
ನ್ಯಾಯಾಲಯಗಳ ರಜೆ ಆ.7ರವರೆಗೆ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
