ಮುಖ್ಯಾಂಶಗಳು
1ಕೋವಿಡ್-19 ಪರೀಕ್ಷೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಿಬೇಕು. ಅಗತ್ಯ ಕಿಟ್ ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಲಾಗುವುದು. ಪ್ರಯೋಗಾಲಯಗಳು ಕಡಿಮೆ ಇದ್ದಲ್ಲಿ ಪಕ್ಕದ ಜಿಲ್ಲೆಯಲ್ಲಿ ಮಾಡಿಸಲು ಕ್ರಮ ವಹಿಸಬೇಕು.
2ಬೂತ್ ಮಟ್ಟದಲ್ಲಿ ಟಾಸ್ಕ್​ಫೋರ್ಸ್ ಸಮಿತಿಗಳು ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಬೇಕು. ಆಕ್ಸಿಜನ್ ಸಮಸ್ಯೆ ಇದ್ದರೆ ಹೆಚ್ಚು ಆಕ್ಸಿಜನ್ ಲಭ್ಯವಿರುವ ಜಿಲ್ಲೆಗಳಿಂದ ಪಡೆದುಕೊಳ್ಳುವುದು.
3ಮನೆ ಮನೆ ಸರ್ವೆ ಮಾಡುವುದು ಮತ್ತು ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಲು ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆದ್ಯತೆ ನೀಡಬೇಕು.
4ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆಯ ಬಗ್ಗೆ ಗಮನ ಹರಿಸಬೇಕು. ಐಸಿಯುಗಳಲ್ಲಿ ವೆಂಟಿಲೇಟರ್ ಲಭ್ಯತೆಯ ಬಗ್ಗೆಯೂ ನಿಗಾ ವಹಿಸಬೇಕು. ಗೃಹ ನಿರ್ಬಂಧದಲ್ಲಿರುವವರ ಬಗ್ಗೆ ಮೇಲ್ವಿಚಾರಣೆಗೆ ಸಹ ಆದ್ಯತೆ ನೀಡುವುದು.
ಜಿಲ್ಲಾಡಳಿಗಳಿಗೆ ಸಿಎಂ ಗುರಿ ನಿಗದಿ900 ತಜ್ಞ ವೈದ್ಯರ ನಿಯೋಜನೆ
ಬೆಂಗಳೂರು:ಕರೊನಾ ಸೋಂಕಿನಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಜಿಲ್ಲಾಡಳಿಗಳಿಗೆ ತಾಕೀತು ಮಾಡಿದೆ. ಗುರುವಾರ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾವಿನ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮಕೈಗೊಳ್ಳಲೇ ಬೇಕೆಂದು ಸೂಚಿಸಿದರು.
ಈ ಹಿಂದಿನ ಸಭೆಗಳಲ್ಲಿ ಜಿಲ್ಲಾಡಳಿಗಳು ಸರ್ಕಾರದ ಮುಂದಿಟ್ಟಿದ್ದ ಬಹುತೇಕ ಬೇಡಿಕೆಗಳು ಬಗೆಹರಿದಿರುವ ಕಾರಣ, ಈ ಸಭೆಯಲ್ಲಿ ಬೆಡ್ ಕೊರತೆ, ಲ್ಯಾಬ್ ಕೊರತೆ ಸೇರಿ ವಿವಿಧ ವಿಚಾರ ಚರ್ಚೆಯಾಗಲಿಲ್ಲ. ಪ್ರಮುಖವಾಗಿ ಸೋಂಕು ಹರಡುವುದನ್ನು ತಡೆಯುವುದು ಮತ್ತು ಸಾವಿನ ಪ್ರಮಾಣ ಇಳಿಸುವ ವಿಚಾರದಲ್ಲೇ ಚರ್ಚೆ ನಡೆಯಿತು. ಇದೇ ವೇಳೆ ಒಂದೆರೆಡು ಜಿಲ್ಲೆಗಳು ಹಣಕಾಸು ಕೋರಿಕೆಯನ್ನು ಮುಂದಿಟ್ಟವು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಉದ್ಬೂರು ಹಾಡಿಯಲ್ಲಿ ಆದಿವಾಸಿ ಗಿರಿಜನರಿಗೆ ಬಲೆ, ಹರಿಗೋಲು, ತಕ್ಕಡಿ ವಿತರಣೆ
ಜಿಲ್ಲಾಧಿಕಾರಿಗಳು ಹೆಚ್ಚಿನ ಆಸಕ್ತಿ ತೋರಿ ಶಕ್ತಿ ಮೀರಿ ಪರಿಸ್ಥಿತಿ ನಿಭಾಯಿಸಲು ಶ್ರಮಿಸಿದ್ದಾರೆ, ವೆಂಟಿಲೇಟರ್ ಕೊರತೆ ಇಲ್ಲ ಎನ್ನುವುದು ಸಮಾಧಾನಕರ ವಿಷಯ ಎಂದ ಅವರು ಈಗಾಗಲೇ ಸ್ನಾತಕೋತ್ತರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಕೌನ್ಸೆಲಿಂಗ್ ಮುಗಿದಿದ್ದು, ಇನ್ನೆರೆಡು ದಿನದಲ್ಲಿ 900ಕ್ಕೂ ಹೆಚ್ಚು ತಜ್ಞ ವೈದ್ಯರನ್ನು ಜಿಲ್ಲೆಗಳಿಗೆ ನಿಯೋಜಿಸಲಾಗುವುದು ಎಂದರು.
ಇದನ್ನೂ ಓದಿ:ಮಕ್ಕಳ ಎದುರೇ ಮಹಿಳೆಯನ್ನು ರೇಪ್​​ ಮಾಡಿದ ದುರುಳರು; ಅವಳ್ಯಾಕೆ ಹೋಗಬೇಕಿತ್ತು ಎಂದ ಪೊಲೀಸ್​ ಮುಖ್ಯಸ್ಥ
ಮೈಸೂರಿಗೆ ವಿಶೇಷ ಎಚ್ಚರಿಕೆ:ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇರುವುದರಿಂದ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕಿದೆ ಎಂದು ಸಿಎಂ ಅಲ್ಲಿನ ಜಿಲ್ಲಾಡಳಿಕ್ಕೆ ಸೂಚಿಸಿದ್ದಾರೆ.
ಎಸ್ಸೆಸ್ಸೆಲ್ಸಿ: ಮರುಮೌಲ್ಯಮಾಪನದ ಬಳಿಕ ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 4 =
Remember me
