ಬೆಂಗಳೂರು:ರಾಜ್ಯದಲ್ಲಿ ಕೋವಿಡ್ -19 ಆರ್ಭಟ ಮುಂದುವರೆದಿದ್ದು, ಶನಿವಾರ 114 ಸೋಂಕಿತರ ಸಾವಿನೊಂದಿಗೆ ಮೃತರ ಸಂಖ್ಯೆ 8 ಸಾವಿರ ಗಡಿ ಸಮೀಪಿಸಿದ್ದು, ಮತ್ತೊಂದೆಡೆ 10,815 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಮೂಲಕ ಗುಣಮುಖರ ಸಂಖ್ಯೆ 4 ಲಕ್ಷ ಗಡಿ ದಾಟಿದೆ. 8,364 ಸೋಂಕು ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 5.11 ಲಕ್ಷ ತಲುಪಿದೆ.
ಒಟ್ಟಾರೆ ಸೋಂಕಿತರಲ್ಲಿ 98,564 ಮಂದಿ ರಾಜ್ಯದ ನಾನಾ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಾಗಿದ್ದು, ಈ ಪೈಕಿ 822 ಮಂದಿ ಗಂಭೀರ ಆರೋಗ್ಯ ಸಮಸ್ಯೆಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಕ್ಷಣ ರಹಿತ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಕರಣಗಳ ವಿವರನಿಗಾದಲ್ಲಿರುವವರು – 4,83,087ಪರೀಕ್ಷಿಸಿದ ಮಾದರಿಗಳು – 41,79,567ಒಟ್ಟು ಸೋಂಕಿತರು – 5,11,346ಮೃತಪಟ್ಟವರು – 7,922ಅನ್ಯಕಾರಣದಿಂದ ಸಾವು – 19ಗುಣಮುಖರಾದವರು – 4,04,841ಚಿಕಿತ್ಸೆ ಪಡೆಯುತ್ತಿರುವವರು – 98,564
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 17 =
Remember me
