ಬೆಂಗಳೂರು:ಕರೊನಾ ಕೋವಿಡ್ 19 ಕೇಸ್​ಗಳ ಸಂಖ್ಯೆ ರಾಜ್ಯ ರಾಜಧಾನಿಯಲ್ಲಿ ದಿನೇದಿನೆ ತ್ವರಿತಗತಿಯಲ್ಲಿ ಹೆಚ್ಚಳವಾಗುತ್ತಿದ್ದು, ಇಂದು (ನಿನ್ನೆ ಸಂಜೆ 5ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿ) ಒಂದೇ ದಿನ 735 ಕೇಸ್​ ಖಚಿತವಾಗಿವೆ. ಇದರೊಂದಿಗೆ ರಾಜಧಾನಿಯಲ್ಲಿ ಕೋವಿಡ್ ಕೇಸ್​ಗಳ ಸಂಖ್ಯೆ 5290ಕ್ಕೆ ಏರಿಕೆಯಾಗಿದೆ. ಈ ಪೈಕಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 543. ಸಕ್ರಿಯ ಕೇಸ್​ಗಳ ಸಂಖ್ಯೆ 4649. ಮರಣ ಪ್ರಮಾಣ ಬೆಂಗಳೂರಿನಲ್ಲಿ ಇದುವರೆಗೆ 97 ಆಗಿದೆ.
ಕೋವಿಡ್​ನಿಂದಾಗಿ ಇಂದು ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 7 ಆಗಿದ್ದು, ಒಟ್ಟು ಮರಣ ಪ್ರಮಾಣ 253 ಆಗಿದೆ. ಈ ಪೈಕಿ ನಾಲ್ಕು ಕೇಸ್​ಗಳಲ್ಲಿ ಕೋವಿಡ್​ ಸೋಂಕಿತರು ಅನ್ಯ ಕಾರಣಗಳಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 16,514 ಕೇಸ್​ಗಳಾಗಿವೆ. ಸಕ್ರಿಯ ಕೇಸ್​ಗಳ ಸಂಖ್ಯೆ 8,194. ರಾಜ್ಯದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 145. ಇದುವರೆಗೆ ಒಟ್ಟು ಬಿಡುಗಡೆಯಾದವರ ಸಂಖ್ಯೆ 8063 ಆಗಿದೆ. ಐಸಿಯುನಲ್ಲಿ 292 ರೋಗಿಗಳು ಚಿಕಿತ್ಸೆಪಡೆಯುತ್ತಿದ್ದಾರೆ.
ಇದನ್ನೂ ಓದಿ:ಎಲ್ಲೆಂದರಲ್ಲಿ ಪಿಪಿಇ ಕಿಟ್​ ಬಿಸಾಡಿದ್ರೆ ಕಠಿಣ ಕ್ರಮ; ಶ್ರೀರಾಮುಲು
ಜಿಲ್ಲಾವಾರು ಡೇಟಾ ಗಮನಿಸಿದರೆ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಇಂದಿನ ಮಟ್ಟಿಗೆ ಟಾಪ್ 5ರ ಪಟ್ಟಿಯಲ್ಲಿ ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29 ಕೇಸ್​ಗಳು ಖಚಿತವಾಗಿವೆ. ಒಟ್ಟು ಪ್ರಕರಣ ಪೈಕಿ ಬೆಂಗಳೂರಿನಲ್ಲೇ ಅಧಿಕ 5290, ಕಲಬುರಗಿ 1450, ಉಡುಪಿ 1228, ಯಾದಗಿರಿ 949, ಬಳ್ಳಾರಿ 919 ಕೇಸ್​ಗಳೊಂದಿಗೆ ಟಾಪ್ 5ರ ಪಟ್ಟಿಯಲ್ಲಿವೆ.
ಚೀನಾದ ಟಿಕ್​ಟಾಕ್ ಜಾಗವನ್ನು ನಮ್ಮ ಬೆಂಗಳೂರಿನ ಚಿಂಗಾರಿ ತುಂಬಿತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
