ಬೆಂಗಳೂರು:ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಲಾರಂಭಿಸಿದೆ. ಬುಧವಾರ 1,478 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,866ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,229 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರ ಒಟ್ಟು ಸಂಖ್ಯೆ 39.42 ಲಕ್ಷ ಮೀರಿದೆ. ಈ ವರೆಗೂ 40,089 ಸೋಂಕಿತರು ಸಾವಿಗೀಡಾಗಿದ್ದು, 39.90 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ.
ಇದನ್ನೂ ಓದಿ:ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ; ಹಾಸ್ಟೆಲ್​ನಲ್ಲಿ ನೇತಾಡುತ್ತಿತ್ತು ಶವ!
ಬೆಂಗಳೂರು ನಗರದಲ್ಲಿ 1,251 ಮಂದಿ, ಬೆಂಗಳೂರು ಗ್ರಾಮಾಂತರದಲ್ಲಿ 32, ಮೈಸೂರು 24, ಧಾರವಾಡ 18, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ತಲಾ 15, ಕೋಲಾರ 13, ಬಳ್ಳಾರಿಯಲ್ಲಿ 12, ಉತ್ತರ ಕನ್ನಡದಲ್ಲಿ 10, ತುಮಕೂರಿನಲ್ಲಿ 9, ದಕ್ಷಿಣ ಕನ್ನಡ, ಹಾಸನ, ಕಲಬುರಗಿ ಮತ್ತು ಉಡುಪಿಯಲ್ಲಿ ತಲಾ 8, ಚಾಮರಾಜನಗರ 7, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ವಿಜಯಪುರದಲ್ಲಿ ತಲಾ 6, ಬೀದರ್ 4, ಚಿಕ್ಕಬಳ್ಳಾಪುರ 3, ದಾವಣಗೆರೆ, ಕೊಪ್ಪಳ ಮತ್ತು ರಾಮನಗರ ತಲಾ ಇಬ್ಬರು ಹಾಗೂ ಚಿತ್ರದರ್ಗು, ರಾಯಚೂರು ಮತ್ತು ಯಾದಗಿರಿ ತಲಾ ಒಬ್ಬರಂತೆ 1,478 ಸೋಂಕು ಪ್ರಕರಣಗಳು ವರದಿಯಾಗಿವೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
