ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕಳೆದ ಹಲವು ದಿನಗಳಿಂದ ನಿರಂತರವಾಗಿ 2 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿವೆ.
ಕಳೆದ 24 ತಾಸುಗಳಲ್ಲಿ ರಾಜ್ಯದಲ್ಲಿ ಒಟ್ಟು 2,738 ಹೊಸ ಕೋವಿಡ್​ ಪ್ರಕರಣಗಳು ಕಂಡು ಬಂದಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 41,581ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ (ಜು.13) ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಂಕಿತರು ಗುಣಮುಖರಾಗುತ್ತಿರುವ ಪ್ರಮಾಣದಲ್ಲೂ ಭಾರಿ ಏರಿಕೆಯಾಗಿರುವುದು ಕೂಡ ಆಶಾದಾಯಕ ಅಂಶವಾಗಿದೆ. ಒಟ್ಟು 839 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು ಚೇತರಿಕೆ ಕಂಡವರು 16,248. ಮೃತರ ಸಂಖ್ಯೆ 73 ಆಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 757ಕ್ಕೆ ಮುಟ್ಟಿದಂತಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24,572 ಆಗಿದೆ.
ಇದನ್ನೂ ಓದಿ;ಕರೊನಾ ಲಸಿಕೆ ಯಶಸ್ವಿ ಎಂದು ಘೋಷಿಸಿದ ರಷ್ಯಾ ಮುಚ್ಚಿಟ್ಟಿದ್ದೇನು?
ಬೆಂಗಳೂರಿನಲ್ಲಿ ಕಳೆದ 24 ತಾಸುಗಳಲ್ಲಿ ಹೊಸ ಪ್ರಕರಣಗಳು 1,315 ಆಗಿದ್ದು, ಒಟ್ಟಾರೆ ಕೋವಿಡ್​ ರೋಗಿಗಳು 19,702 ಈ ಪೈಕಿ ಸಕ್ರಿಯವಾಗಿರುವ ಪ್ರಕರಣಗಳು 15,052 ಆಗಿವೆ. ಮೃತರ ಸಂಖ್ಯೆ 47 ಹೆಚ್ಚಾಗುವ ಮೂಲಕ ರಾಜಧಾನಿಯಲ್ಲಿ ಒಟ್ಟು 321 ಜನರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಅಂಕಿ-ಅಂಶಗಳ ಪಟ್ಟಿ ಇಲ್ಲಿದೆ…

ಆಕ್ಸ್​ಫರ್ಡ್​ ವಿವಿ ತಜ್ಞರ ಕರೊನಾ ಲಸಿಕೆ ಅಭಿವೃದ್ಧಿಗೆ ಜೀವವನ್ನೇ ಪಣಕ್ಕಿಟ್ಟ ಭಾರತೀಯ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
