ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕು ವ್ಯಾಪಿಸುತ್ತಿರುವುದು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿಗೆ ಕೋವಿಡ್​ ಪೀಡಿತರ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ನಿನ್ನೆ ಒಟ್ಟು 8,580 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ, ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷ ದಾಟಿದಂತಾಗಿದೆ.
ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಒಟ್ಟು 133 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟಾರೆ ಸಾವಿನ ಪ್ರಮಾಣವೂ 5 ಸಾವಿರ ದಾಟಿ, 5091ಕ್ಕೆ ತಲುಪಿದೆ. 7,249 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಕೋವಿಡ್​ನಿಂದ ಚೇತರಿಕೆ ಕಂಡವರ ಸಂಖ್ಯೆ 2,11,688 ಆಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 83,608ಕ್ಕೆ ತಲುಪಿದಂತಾಗಿದೆ. ಒಟ್ಟು 760 ಜನರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ;ಶಾಲಾ- ಕಾಲೇಜು ಮತ್ತೆ ಬಂದ್​; ಫ್ಯಾನ್​ ಬಳಕೆಗೂ ನಿರ್ಬಂಧ ವಿಧಿಸಿದೆ ಈ ದೇಶ…!
ಇನ್ನು, ರಾಜಧಾನಿಯಲ್ಲಿಯೂ ಮತ್ತೊಮ್ಮೆ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ. ನಿನ್ನೆ ಒಟ್ಟು 3,284 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಕೋವಿಡ್​ ರೋಗಿಗಳ ಸಂಖ್ಯೆ 1,15,371 ಆಗಿದೆ.
ಇನ್ನೊಂದೆಡೆ, 31 ಜನರು ಸಾವಿಗೀಡಾಗುವ ಮೂಲಕ 1,786 ಜನರು ಈವರೆಗೆ ಮೃತಪಟ್ಟಿದ್ದಾರೆ. ಒಟ್ಟು 2,300 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ಸಕ್ರಿಯ ಕೇಸ್​ಗಳ ಸಂಖ್ಯೆ 36,053ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಕೋವಿಡ್​ ವಿವರ

ಶುರುವಾಯ್ತು 225 ರೂ. ಬೆಲೆಯ ಕರೊನಾ ಲಸಿಕೆ ಕ್ಲಿನಿಕಲ್​ ಟ್ರಯಲ್​; ಮೈಸೂರು ಸೇರಿ 17 ಕಡೆ ಪ್ರಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
