ಬೆಂಗಳೂರು:ರಾಜ್ಯದಲ್ಲಿ ದೈನಂದಿನ ಕರೊನಾ ಪ್ರಕರಣ ಗಣನೀಯವಾಗಿ ಇಳಿಯುವ ಜತೆಗೆ ಕರೊನಾತಂಕ ತಗ್ಗಿರುವ ಲಕ್ಷಣಗಳು ಗೋಚರಿಸಿವೆ. ಅದರಲ್ಲೂ ರಾಜ್ಯದಲ್ಲಿ ಒಂದೇ ದಿನದಲ್ಲಿ ಹತ್ತು ಸಾವಿರ ಪ್ರಕರಣಗಳು ಕಡಿಮೆ ಆಗಿದ್ದು, ಸಕ್ರಿಯ ಪ್ರಕರಣ ಕೂಡ ಇಳಿದಿದೆ.
ನಿನ್ನೆ ರಾಜ್ಯದಲ್ಲಿ 24,172 ಕರೊನಾ ಪ್ರಕರಣಗಳು ದೃಢಪಟ್ಟಿದ್ದರೂ ಇಂದು ಬರೀ 14,366 ಪ್ರಕರಣಗಳಷ್ಟೇ ಪತ್ತೆಯಾಗಿವೆ. ಮತ್ತೊಂದೆಡೆ ಇವತ್ತೊಂದೇ ದಿನ ರಾಜ್ಯದಲ್ಲಿ 60,914 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇನ್ನೊಂದೆಡೆ ನಿನ್ನೆ ಶೇ. 17.11ರಷ್ಟಿದ್ದ ಪಾಸಿಟಿವಿಟಿ ದರ ಇವತ್ತು ಶೇ. 13.44ಕ್ಕೆ ಇಳಿದಿದೆ.
ಅಲ್ಲದೆ ರಾಜ್ಯದಲ್ಲಿನ ಕರೊನಾ ಸಕ್ರಿಯ ಪ್ರಕರಣಗಳಲ್ಲೂ ವ್ಯಾಪಕ ಇಳಿಕೆ ಕಂಡುಬಂದಿದೆ. ನಿನ್ನೆ ರಾಜ್ಯದಲ್ಲಿ 2,44,331 ಇದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಂದು ಎರಡು ಲಕ್ಷಕ್ಕಿಂತಲೂ ಕಡಿಮೆ ಎಂದರೆ 1,97,725ಕ್ಕೆ ಇಳಿದಿದೆ. ಅದಾಗ್ಯೂ ರಾಜ್ಯದಲ್ಲಿ ಇಂದು ನಿನ್ನೆಗಿಂತಲೂ ಹೆಚ್ಚುಮಂದಿ ಕರೊನಾಗೆ ಬಲಿಯಾಗಿದ್ದಾರೆ. ನಿನ್ನೆ 56 ಜನ ಕರೊನಾದಿಂದ ಸಾವಿಗೀಡಾಗಿದ್ದರೆ ಇಂದು 58 ಮಂದಿ ಕೋವಿಡ್​ನಿಂದಾಗಿ ಮೃತಪಟ್ಟಿದ್ದಾರೆ.
ಅದರಲ್ಲಿ ಪೊಲೀಸರ ತಪ್ಪಿಲ್ಲ, ಇದರಲ್ಲಿ ತಪ್ಪಿತ್ತು..: ಸಂಚಾರ ಪೊಲೀಸರ ವಿರುದ್ಧದ ಟೀಕೆಗಳಿಗೆ ರವಿಕಾಂತೇಗೌಡ ಲಿಖಿತ ಉತ್ತರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − one =
Remember me
