ಬೆಂಗಳೂರು:ವಾರದ ಹಿಂದೆ ದೈನಂದಿನ ಕರೊನಾ ಪ್ರಕರಣ 50 ಸಾವಿರವನ್ನು ದಾಟಿದ್ದಲ್ಲದೆ, ಆ ಬಳಿಕ ಕೆಲವು ದಿನ 40 ಸಾವಿರದ ಆಸುಪಾಸಲ್ಲೇ ಇದ್ದು, ಕಳೆದೆರಡು ದಿನಗಳಿಂದ 30 ಸಾವಿರದ ಆಸುಪಾಸಿಗೆ ಬಂದಿತ್ತು. ಇಂದು ದೈನಂದಿನ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 28,264 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆ ಪೈಕಿ ರಾಜಧಾನಿ ಬೆಂಗಳೂರಿನಲ್ಲಿ 11,938 ಪ್ರಕರಣಗಳು ಕಂಡುಬಂದಿವೆ. ಇದರೊಂದಿಗೆ ಸಕ್ರಿಯ ಕರೊನಾ ಪ್ರಕರಣಗಳ ಸಂಖ್ಯೆ 2,51,084 ಆಗಿದೆ. ಇನ್ನು ರಾಜ್ಯದಲ್ಲಿ ಹೆಚ್ಚೂಕಮ್ಮಿ ಇಂದು ಖಚಿತವಾದ ಪ್ರಕರಣಗಳಷ್ಟೇ (29,244) ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಅಲ್ಲದೆ ರಾಜ್ಯದಲ್ಲಿನ ಪಾಸಿಟಿವಿಟಿ ದರದಲ್ಲೂ ಇಳಿಕೆಯಾಗಿದ್ದು, ಅದು ಶೇ. 16.38ಕ್ಕೆ ಕುಸಿದಿದೆ. ಅದಾಗ್ಯೂ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 68 ಮಂದಿ ಕರೊನಾದಿಂದಾಗಿ ಸಾವಿಗೀಡಾಗಿದ್ದಾರೆ. ಕಳೆದ ವಾರ ಇದೇ ದಿನ ರಾಜ್ಯದಲ್ಲಿನ ದೈನಂದಿನ ಸೋಂಕಿನ ಪ್ರಮಾಣ 50 ಸಾವಿರ ದಾಟಿತ್ತು. ಅಂದರೆ ಜ. 23ರಂದು ರಾಜ್ಯದಲ್ಲಿ ಹೊಸದಾಗಿ 50,210 ಮಂದಿಯಲ್ಲಿ ಕರೊನಾ ದೃಢಪಟ್ಟಿತ್ತು. ಪಾಸಿಟಿವಿಟಿ ದರ ಶೇ. 22.77 ಇದ್ದು, ಕರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,57,796 ಇತ್ತು. ಒಂದೇ ವಾರದಲ್ಲಿ ಇವೆಲ್ಲವೂ ಗಣನೀಯ ಪ್ರಮಾಣದಲ್ಲಿ ತಗ್ಗಿವೆ.
ಪ್ರಧಾನಿಗೇ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕರು ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ

ನಾಳೆ ಈ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಯಾವ ಕೆಲಸವೂ ಆಗಲ್ಲ; ನೌಕರರಿಂದ ರಾಜಕೀಯ ಪಕ್ಷದ ವಿರುದ್ಧ ಹೋರಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
