ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಭಾನುವಾರ 7,810 ಹೊಸ ಪ್ರಕರಣ ವರದಿಯಾಗಿದೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 6.02 ತಲುಪಿದೆ. 125 ಮಂದಿ ಸಾವಿನೊಂದಿಗೆ ಮರಣ ಪ್ರಮಾಣ ದರ ಶೇ. 1.60ಕ್ಕೆ ಕುಸಿದಿದೆ.
ಕಳೆದ 24 ಗಂಟೆಯಲ್ಲಿ 18,648 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಒಟ್ಟು ಸಂಖ್ಯೆ 25.51 ಲಕ್ಷ ಮೀರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.80 ಲಕ್ಷಕ್ಕೆ ಇಳಿಕೆಯಾಗಿದೆ. ಈವರೆಗಿನ ಸೋಂಕಿತರ ಒಟ್ಟು ಸಂಖ್ಯೆ 27.65 ಲಕ್ಷ ದಾಟಿದೆ. ಬೆಂಗಳೂರು ನಗರದಲ್ಲಿ 1,348, ಮೈಸೂರು 1,251, ಹಾಸನ 581 ಅತಿ ಹೆಚ್ಚು ಪ್ರಕರಣ ವರದಿಯಾಗಿವೆ. ಒಂಬತ್ತು ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿದ್ದು, ಬೀದರ್‌ನಲ್ಲಿ ಕೇವಲ 7 ಪ್ರಕರಣಗಳು ವರದಿಯಾಗಿವೆ.
ಮೈಸೂರಿನಲ್ಲಿ 25, ಬೆಂಗಳೂರು ನಗರದಲ್ಲಿ 23, ಬೆಳಗಾವಿ ಮತ್ತು ಧಾರವಾಡದಲ್ಲಿ ತಲಾ 9, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ತಲಾ 7, ಚಿಕ್ಕಮಗಳುರು ಮತ್ತು ಉಡುಪಿ ತಲಾ 4, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾವೇರಿ, ಕೊಪ್ಪಳ, ಶಿವಮೊಗ್ಗ, ತುಮಕೂರು ಮತ್ತು ಉತ್ತರ ಕನ್ನಡ ತಲಾ 3, ಕೋಲಾರ, ರಾಯಚೂರು ಮತ್ತು ವಿಜಯಪುರ ತಲಾ ಇಬ್ಬರು ಹಾಗೂ ದಕ್ಷಿಣ ಕನ್ನಡ, ಗದಗ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು, ಎಂಟು ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಶೂನ್ಯಕ್ಕೆ ಇಳಿದಿದೆ.
ಕುಡಿದ ಮತ್ತಿನಲ್ಲಿ ದಂಪತಿ ನಡುವೆ ನಡೆದ ಜಗಳ ಭೀಕರ ಕೊಲೆಯಲ್ಲಿ ಅಂತ್ಯ

ಒಂದೇ ಗ್ರಾಮದ 80 ಮಂದಿಯನ್ನು ಬೇಟೆಯಾಡಿ ತಿಂದಿದ್ದ ದೈತ್ಯ ಮೊಸಳೆ ಕೊನೆಗೂ ಸರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
