ದಾವಣಗೆರೆ:ಕರೊನಾ ಸಂಕಷ್ಟದ ಈ ಸಂದರ್ಭದಲ್ಲಿ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಸಾಮಾಜಿಕ ಸೇವೆಗಳಿಂದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗಾಗಲೇ ಹಲವರ ಮೆಚ್ಚುಗೆಗೆ ಪಾತ್ರರಾಗಿ ಕಳೆದ ಕೆಲವು ದಿನಗಳಿಂದ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಇದೀಗ ಅವರು ಮತ್ತೊಮ್ಮೆ ಜನರ ಗಮನವನ್ನು ತಮ್ಮತ್ತ ಸೆಳೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಕರೊನಾ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ರೇಣುಕಾಚಾರ್ಯ ಇಂದು ಪುಷ್ಪಾರ್ಪಣೆ ಮಾಡಿ ಬೀಳ್ಕೊಟ್ಟರು. ಈ ಕೇಂದ್ರದಿಂದ ಇಂದು 25 ಮಂದಿ ಸೋಂಕುಮುಕ್ತರಾಗಿ ಬಿಡುಗಡೆ ಹೊಂದಿದ್ದಾರೆ. ಈ ಎಲ್ಲರ ಮೇಲೂ ಹೂಮಳೆಗರೆದ ರೇಣುಕಾಚಾರ್ಯ ಆಪ್ತವಾಗಿ ಬೀಳ್ಕೊಟ್ಟರು. ಇದರಿಂದ ಸಂತಸಗೊಂಡ ಸೋಂಕುಮುಕ್ತರು ಒಬ್ಬೊಬ್ಬರಾಗಿ ಶಾಸಕರ ಕಾಲಿಗೆ ನಮಸ್ಕರಿಸಿ ತೆರಳಿದರು. ಈ ವಿಡಿಯೋ ವೈರಲ್ ಆಗುತ್ತಿದ್ದು, ಜನರ ಮೆಚ್ಚುಗೆ ಪಡೆಯುತ್ತಿದೆ.

ಸಿನಿಮೀಯ ರೀತಿಯಲ್ಲಿ ಗೋರಕ್ಷಣೆ; 1 ಕಿ.ಮೀ. ದೂರ ಕಾರಲ್ಲಿ ರಿವರ್ಸ್ ಹೋಗಿ ಪರಾರಿಯಾದ ದನಗಳ್ಳರು!

ಲಾಕ್​ಡೌನ್​ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಬಿಎಸ್​ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
