ಬೆಂಗಳೂರು:ರಾಜ್ಯದಲ್ಲಿ ಗುರುವಾರ 158 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 568 ಹಾಗೂ ಸೋಂಕು ಪ್ರಮಾಣ ದರ ಶೇ. 1.89 ತಲುಪಿದೆ.
ಕಳೆದ 24 ಗಂಟೆಗಳಲ್ಲಿ 8,350 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 85, ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ತಲಾ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಹಾಗೂ ಹಾಸನ ತಲಾ ಇಬ್ಬರು ಮತ್ತು ಬೀದರ್, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಬ್ಬರಂತೆ 158 ಮಂದಿ ಸೋಂಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ 568 ಸಕ್ರಿಯ ಪ್ರಕರಣಗಳಲ್ಲಿ 514 ಸೋಂಕಿತರು ಮನೆ ಆರೈಕೆಗೆ ಒಳಗಾದ್ದು, 54 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇವರಲ್ಲಿ 14 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ 40 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
