ಬೆಂಗಳೂರು:ಕಾರ್ಯನಿರತ ಪತ್ರಕರ್ತರನ್ನು(ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಎಚ್​ಡಿಕೆ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಟ್ವೀಟ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು.ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)June 27, 2020

ಕರೊನಾ ವಾರಿಯರ್ಸ್ ಎಂದು ಪತ್ರಕರ್ತರನ್ನು ಹೆಸರಿಗಷ್ಟೇ ಹೇಳಲಾಗಿದೆ. ಅವರಿಗೆ ಯಾವುದೇ ರೀತಿಯ ವಿಮೆ ಸೌಲಭ್ಯವನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಎಚ್​ಡಿಕೆ, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಕೋವಿಡ್​ ವಿಮೆ ಅನ್ವಯ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − five =
Remember me
