ಕಲಬುರಗಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಎಂಟು ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಬೆನ್ನಿಗೆ ಕರ್ನಾಟಕದಲ್ಲೂ ಅಂಥದ್ದೇ ದುರಂತ ಸಾವಿನ ಪ್ರಕರಣ ಕಂಡುಬಂದಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಒಬ್ಬರಲ್ಲ ನಾಲ್ವರು ಕೊನೆಯುಸಿರೆಳೆದಿದ್ದಾರೆ.
ಕಲಬುರಗಿಯ ಕೆಬಿಎನ್​ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಈ ಆಸ್ಪತ್ರೆಯಲ್ಲಿ ಕರೊನಾ ಸೋಂಕಿತ ಹಲವರು ಚಿಕಿತ್ಸೆ ಪಡೆಯುತ್ತಿದ್ದು, ಆ ಪೈಕಿ ನಾಲ್ವರಿಗೆ ಆಕ್ಸಿಜನ್ ಕೊರತೆಯಾಗಿದೆ. ಚಿಕಿತ್ಸೆಯಲ್ಲಿರುವಾಗಲೇ ದಾಸ್ತಾನು ಮುಗಿದ ಕಾರಣ, ಈ ನಾಲ್ವರು ಉಸಿರಾಟದ ಸಮಸ್ಯೆ ತೀವ್ರಗೊಂಡು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸತತ ಮೂರೂ ದಿನ 200ಕ್ಕೂ ಅಧಿಕ ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದು, ಇವತ್ತೊಂದೇ ದಿನ 271 ಜನರು ಕರೊನಾಗೆ ಬಲಿಯಾಗಿದ್ದಾರೆ. ಮತ್ತೊಂದೆಡೆ 40,990 ಪ್ರಕರಣ ಇಂದು ಹೊಸದಾಗಿ ದೃಢಪಟ್ಟಿದ್ದು, ಸೋಂಕು ವ್ಯಾಪಿಸುತ್ತಲೇ ಇರುವುದರಿಂದ ಈಗಾಗಲೇ ಉಂಟಾಗಿರುವ ಆಕ್ಸಿಜನ್, ಐಸಿಯು ಹಾಗೂ ಬೆಡ್ ಕೊರತೆ ಸಮಸ್ಯೆಗಳು ಮತ್ತಷ್ಟು ಕಗ್ಗಂಟಾಗುತ್ತಲೇ ಇವೆ.
ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ, ಮತ್ತೆ 8 ಕರೊನಾ ರೋಗಿಗಳ ಸಾವು

ಕರೊನಾ ಸೋಂಕಿತರಿಗಾಗಿ ಪತ್ನಿಯ ಆಭರಣ ಮಾರಿದ; ಉಸಿರಾಟದ ಸಮಸ್ಯೆ ಇರುವವರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
