ಬೆಂಗಳೂರು:ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದ ಒಂದೇ ದಿನದಲ್ಲಿ ಡಿಸ್ಚಾರ್ಜ್​ ಆಗಿದ್ದಾರೆ.
ಧ್ರುವ ಸರ್ಜಾ ದಂಪತಿಗೆ ಸೋಂಕು ಇರುವುದು ನಿನ್ನೆ(ಬುಧವಾರ) ಗೊತ್ತಾಗಿತ್ತು. ಚಿಕಿತ್ಸೆಗಾಗಿ ದಾಖಲಾಗಿದ್ದ ದಂಪತಿ ಅಂದು ಸಂಜೆಯೇ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಸ್ವಲ್ಪ ಜ್ವರ ಬಿಟ್ಟರೆ ಬೇರೇನೂ ಲಕ್ಷಣಗಳು ಇರಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಇದನ್ನೂ ಓದಿರಿಕಲಾ ವಿಭಾಗದಲ್ಲಿ ರೈತನ ಮಗ ಕರಿಗೌಡ ದಾಸನಗೌಡ್ರ ರಾಜ್ಯಕ್ಕೆ ಟಾಪರ್​
ಸೋಂಕು ತಗುಲಿರುವ ಬಗ್ಗೆ ಟ್ವಿಟರ್​ನಲ್ಲಿ ನಿನ್ನೆ ಮಾಹಿತಿ ಹಂಚಿಕೊಂಡಿದ್ದ ಧ್ರುವ ಸರ್ಜಾ, ‘ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ. ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ’ ಎಂದು ಹೇಳಿಕೊಂಡಿದ್ದರು.
‘ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಕೋರಿದ್ದಾರೆ.
ಕೋವಿಡ್​ ಸೋಂಕಿತ ಪವಾಡ ಪುರುಷ ಹಾಲಸ್ವಾಮೀಜಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
