ಬೆಂಗಳೂರು:ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆ ಹಾಗೂ ನಿಯಂತ್ರಣಕ್ಕಾಗಿ ಔಷಧಿ ಮತ್ತು ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯು ಔಷಧಿ ಮತ್ತು ಉಪಕರಣಗಳ ಖರೀದಿಯಲ್ಲಿ ಅವ್ಯವಹಾರಗಳಿಗೆ ಎಂಬ ಆರೋಪವಿತ್ತು. 2021ರ ಆಗಸ್ಟ್‌ನಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಅಕ್ರಮಗಳಾಗಿವೆ ಎಂದು ನೀಡಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ಸರ್ಕಾರ ತೀರ್ಮಾನಿಸಿದೆ.
ನ್ಯಾ.ಕುನ್ಹಾ ನೇತೃತ್ವದ ಆಯೋಗವು ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ತನಿಖಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳು, ವೈದ್ಯರು, ತಾಂತ್ರಿಕ, ಆರ್ಥಿಕ, ಆಡಳಿತಾತ್ಮಕ ಸಲಹೆಗಾರರನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಿ ಸಹಕರಿಸಬೇಕು ಎಂದು ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
