ಬೆಂಗಳೂರು:ಕೇರಳ, ತಮಿಳುನಾಡಿನಲ್ಲಿ ಕೋವಿಡ್ ಹೊಸ ಉಪತಳಿ (ಜೆನ್.1) ಪತ್ತೆ ವರದಿಯಾಗಿರುವ ಕಾರಣಕ್ಕೆ ರಾಜ್ಯದಲ್ಲಿ ಅಂತಾರಾಜ್ಯ ಗಡಿ ಬಂದ್ ಸೇರಿ ಕಠಿಣ ನಿರ್ಬಂಧಗಳನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ದೃಢಪಡಿಸಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಹೊಸದಾಗಿ ಪತ್ತೆಯಾದ ಉಪತಳಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದ ಗಡಿಯಲ್ಲಿ ಕಟೆಚ್ಚರವಹಿಸಲಾಗಿದೆ. ಹೊರ ರಾಜ್ಯಗಳಿಂದ ಬಂದವರ ಪೈಕಿ ಕೋವಿಡ್ ಸೋಂಕು ಲಕ್ಷಣಗಳು ಉಳ್ಳವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆ ಚುರುಕುಗೊಳಿಸಿ, ಮುಂದಿನ ಶನಿವಾರದ ವೇಳೆಗೆ ಪ್ರತಿದಿನ ಐದು ಸಾವಿರ ಆರ್‌ಟಿಪಿಸಿಆರ್ ಟೆಸ್ಟ್ ಗುರಿ ನಿಗದಿಪಡಿಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಏರ್ಪಾಟುಗಳನ್ನು ಮಾಡಿಕೊಳ್ಳಲು ತಿಳಿಸಲಾಗಿದೆ.
ಜಾಗತಿಕವಾಗಿಯೂ ಕೋವಿಡ್ ರೂಪಾಂತರ ತಳಿ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರು ವರ್ಚುವಲ್ ವೇದಿಕೆ ಮೂಲಕ ಎಲ್ಲ ರಾಜ್ಯ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಕೇಂದ್ರ ಸಚಿವರ ಸಭೆಯಲ್ಲಿ ನೀಡಬೇಕಾದ ವಿವರ, ರಾಜ್ಯದಲ್ಲಿ ಕೈಗೊಂಡಿರುವ ಸಿದ್ಧತೆ, ಮುನ್ನೆಚ್ಚರಿಕೆ ಕ್ರಮ, ಅಗತ್ಯವಿರುವ ಪರಿಕರ ಮುಂತಾದ ಮಾಹಿತಿ ನೀಡಲೆಂದು ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿರುವೆ ಎಂದು ತಿಳಿಸಿದರು.
ಸೋಂಕು ಹರಡುವುದನ್ನು ತಪ್ಪಿಸಲು, ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವುದು, ತೀವ್ರ ಉಸಿರಾಟದ ಸಮಸ್ಯೆ, ಸೋಂಕು ಸಾಧ್ಯತೆಯುಳ್ಳ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಸಮಜಾಯಿಷಿ ನೀಡಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಮಾಡಿಸುತ್ತಿಲ್ಲ. ಮುಂಜಾಗ್ರತೆ ದೃಷ್ಟಿಯಿಂದ ಸಾರ್ವಜನಿಕರು ಅನುಸರಿಸಬೇಕಾದ ಮಾರ್ಗಸೂಚಿ ಹೊರಡಿಸಲಾಗಿದೆ ಎಂದರು.
ಜತೆಗೆ ತಾಲೂಕು, ಜಿಲ್ಲಾ ಆಸ್ಪತ್ರೆಗಳಿಗೆ ಸುತ್ತೋಲೆ ರವಾನಿಸಿ, ವೆಂಟಿಲೇಟರ್, ಐಸಿಯುವ ಬೆಡ್, ಆಕ್ಸಿಜನ್ ಪ್ಲ್ಯಾಂಟ್, ಇನ್ನಿತರ ಯಂತ್ರೋಪಕರಣ, ಪರಿಕರಗಳ ಲಭ್ಯತೆ ಖಚಿತಪಡಿಸಿಕೊಂಡು, ಈ ಕುರಿತು ವರದಿ ಸಲ್ಲಿಸಲು ತಿಳಿಸಲಾಗಿದೆ.
ಕೋವಿಡ್ ಟೆಸ್ಟ್‌ಗೆ ಬೇಕಾದ ಆರ್‌ಟಿಪಿಸಿಆರ್ ಕಿಟ್‌ಗಳನ್ನು ಎಲ್ಲ ಜಿಲ್ಲೆಗಳಿಗೆ ಪೂರೈಸಲು ಸೂಚನೆ ನೀಡಿದ್ದು, ಹೃದಯ ಸಂಬಂಧಿ, ಉಸಿರಾಟ, ಸೋಂಕಿಗೆ ಒಳಗಾಗುವ ಸಾಧ್ಯತೆಯುಳ್ಳವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಕಡ್ಡಾಯವಾಗಿ ಕೋವಿಡ್ ಟೆಸ್ಟ್‌ಗೆ ಒಳಪಡಿಸಲು ತಿಳಿಸಲಾಗಿದೆ.
ಸಭೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪರ್ಕಿಸಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ, ಮಾಡಿಕೊಂಡ ಸಿದ್ಧತೆಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು.
ಕೇಂದ್ರ ಆರೋಗ್ಯ ಸಚಿವರ ಜತೆಗೆ ಬುಧವಾರ ಸಭೆ ನಡೆಸಿದ ಬಳಿಕ ನೀಡುವ ಸೂಚನೆಯಂತೆ ಮುಂದಿನ ಕ್ರಮವಹಿಸಲಾಗುವುದು. ಸಿಎಂ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ಗುರುವಾರ ನಡೆಸಲಾಗುವುದು.
ಸಭೆಯಲ್ಲಿ ಇಲಾಖೆ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್, ಆಯುಕ್ತ ರಂದೀಪ್ ಇನ್ನಿತರ ಅಧಿಕಾರಿಗಳು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
