ಮಂಡ್ಯ:ಕೋವಿಡ್ ನಿಯಮ ಮೀರಿ ಮದುವೆ ನಡೆಯುತ್ತಿದ್ದ ಜಾಗಕ್ಕೆ ಅಧಿಕಾರಿಗಳು ದಾಳಿ ನಡೆಸಿ, ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮದುವೆ ಮನೆಯಲ್ಲಿ ಕೆಲಕಾಲ ಗದ್ದಲ-ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಮಂಡ್ಯ ತಾಲೂಕು ಎಚ್.ಮಲ್ಲಿಗೆರೆ ಗ್ರಾಮದ ಅಂಬೆಗಾಲು ಕೃಷ್ಣ ದೇವಸ್ಥಾನದಲ್ಲಿ ಈ ಮದುವೆ ಆಯೋಜಿಸಲಾಗಿತ್ತು.
ಮದುವೆಯಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಕೋವಿಡ್​-19 ಮಾರ್ಗಸೂಚಿಗಳ ಪಾಲನೆಯಾಗದ್ದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮದುವೆ ಮನೆಯವರು ಅಧಿಕಾರಿಗಳ ಮೇಲೆ ಹರಿಹಾಯ್ದ ಪ್ರಸಂಗವೂ ನಡೆಯಿತು.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಮದುವೆ ನಿಲ್ಲಿಸುವಂತೆ ಆಯೋಜಕರಿಗೆ ಅಧಿಕಾರಿಗಳು ಹಾಗೂ ಪೊಲೀಸರು ಸೂಚನೆ ನೀಡಿದ್ದರೂ ಮದುವೆ ಮನೆಯವರು ಲೆಕ್ಕಿಸದೆ ವಾದಕ್ಕಿಳಿದರು. ಕೊನೆಗೆ ಕರ್ತವ್ಯ ಅಡ್ಡಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು, ಮದುವೆ ಮನೆಯಲ್ಲಿದ್ದ ಮೂರು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ಪನ ಹೆಣ ಬೇಡ, ಅವರ ಹಣ ಬೇಕು; ಅನಾಥ ಶವ ಎಂದರೂ ಸರಿ ಎಂದ, 6 ಲಕ್ಷ ಇದೆ ಎಂದಾಗ 5 ನಿಮಿಷ ಎಂದು ಹೇಳಿದ ಮಗ!

ಗಾಳಿಯಲ್ಲೂ ಹರಡುವ ಕರೊನಾ ವೈರಸ್ ನಿಷ್ಕ್ರಿಯಗೊಳಿಸಲು ಬಂದಿದೆ ಏರ್ ಡಕ್ಟ್​!; ಸಿಎಸ್ಐಆರ್ ಸಂಶೋಧಿತ ಯುವಿ-ಸಿ ವಾಯುನಾಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
