ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ‘ಯುವರತ್ನ’ ಚಿತ್ರದ ಪ್ರಚಾರ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯಾಗದ ಆರೋಪ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಮೆಮೋ ಸಲ್ಲಿಸಿ, ಯುವರತ್ನ ಚಿತ್ರತಂಡ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಿದೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಉಲ್ಲಂಸಲಾಗಿದೆ ಎಂದು ಫೋಟೋಗಳ ಸಹಿತ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದನ್ನೂ ಓದಿ:Fact Check: ಅಮೆಜಾನ್ ತನ್ನ 30ನೇ ವರ್ಷಾಚರಣೆಯ ಪ್ರಯುಕ್ತ ಉಚಿತ ಉಡುಗೊರೆ ನೀಡುತ್ತಿದೆಯೇ?
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಮತ್ತೆ ಶೇ.50 ಆಸನಗಳಿಗೆ ಮಾತ್ರ ಅವಕಾಶ ಕಲ್ಪಿಸುವ ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದ ಪುನೀತ್, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ತಿಳಿಸಿದ್ದರು. ಆದರೆ, ಪ್ರಚಾರದ ಹೆಸರಿನಲ್ಲಿ ಸಾವಿರಾರು ಮಂದಿ ಸೇರುವಂತೆ ಮಾಡುತ್ತಿದ್ದಾರೆ. ಅಲ್ಲಿ ಸೇರಿದ ಜನರು ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮಗಳನ್ನು ಉಲ್ಲಂಸಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ, ನಟ ದರ್ಶನ್ ಅಭಿಯನದ ‘ರಾಬರ್ಟ್’ ಚಿತ್ರತಂಡವೂ ಇದೇ ತಿಂಗಳ ಕೊನೆಯಲ್ಲಿ ‘ವಿಜಯೋತ್ಸವ’ ಆಚರಿಸಲು ಮುಂದಾಗಿದೆ ಎಂಬ ವಿಚಾರ ಮಾಧ್ಯಮಗಳಿಂದ ತಿಳಿದುಬಂದಿದೆ. ಅಲ್ಲಿಯೂ ಸಹ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆಯಾಗುವ ಸಾಧ್ಯತೆ ಇದೆ. ಆದ್ದರಿಂದ, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕಂದು ಮನವಿ ಮಾಡಿದ ಅವರು, ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಿದ ರಾಲಿಯಲ್ಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು.
ವಾದ ಆಲಿಸಿದ ಪೀಠ, ಬಿಜೆಪಿ ರಾಲಿ ಹಾಗೂ ಯುವರತ್ನ ಚಿತ್ರದ ಸಮಾರಂಭಗಳಲ್ಲಿ ನಿಯಮ ಉಲ್ಲಂಸಿರುವವರ ವಿರುದ್ಧ ಕ್ರಮ ಕೈಗೊಂಡು, ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಏ.8ಕ್ಕೆ ಮುಂದೂಡಿತು.
ಕಾಶಪ್ಪನವರ್ ವಿರುದ್ಧ ಎಫ್ಐಆರ್:ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಕಳೆದ ಫೆ.21ರಂದು ನಡೆದ ಸಮಾವೇಶದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ ಸಂಬಂಧ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಮಾವೇಶದಲ್ಲಿ 80 ಸಾವಿರ ಮಂದಿ ಭಾಗಿಯಾಗಿದ್ದರು. ಫ್ರೀಡಂ ಪಾರ್ಕ್ ವರೆಗಿನ ರಾಲಿಯಲ್ಲಿ 4 ಸಾವಿರ ಜನ ಇದ್ದರು ಎಂದು ಸರ್ಕಾರ ಸಲ್ಲಿಸಿರುವ ಮೆಮೋದಲ್ಲಿ ಹೇಳಲಾಗಿದೆ. (ವಿಜಯವಾಣಿ).
ಉದ್ಯಮಿಗಳ ಸುಲಿಗೆ ಹಿಂದಿದ್ದ ಇಡಿ ಅಧಿಕಾರಿ ಸಿಬಿಐ ಬಲೆಗೆ

‘ಕೂ’ ಆ್ಯಪ್‌ನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಬಂಡವಾಳ ಹೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − one =
Remember me
