ಬೆಂಗಳೂರು: ಸೆ.21ರಿಂದ ನಡೆಯುವ ವಿಧಾನಮಂಡಲ ಕಲಾಪದಲ್ಲಿ ಪಾಲ್ಗೊಳ್ಳುವ ಸಚಿವರು, ಶಾಸಕರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿ ಮತ್ತು ಸಚಿವಾಲಯ ಸಿಬ್ಬಂದಿಗೆ ಕರೊನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಖಚಿತಪಡಿಸಿದ್ದಾರೆ.
ವಿಧಾನಸಭೆ ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ 72 ಗಂಟೆಗಳ ಮುನ್ನ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಿಸಿ, ವರದಿ ಇಟ್ಟುಕೊಂಡಿರಬೇಕು. ಇಲ್ಲಿಗೆ ಬಂದ ಬಳಿಕ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್ ಬಳಕೆ, ಫೇಸ್​ಶೀಲ್ಡ್ ಬಳಕೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಸೆ.18ರಂದು ಅಧಿಕಾರಿ, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳಿಗಾಗಿ ವಿಧಾನಸೌಧದಲ್ಲಿ ಟೆಸ್ಟ್ ನಡೆಸಲಾಗುತ್ತದೆ.
ಇದನ್ನೂ ಓದಿ:ಗಾಂಜಾ ಗಮ್ಮತ್ತಿಗೆ ತೆಲಂಗಾಣ ಮಹಾಲಿಂಕ್
ಶಾಸಕರು, ಸಚಿವರು ತಾಲೂಕು ಅಥವಾ ಜಿಲ್ಲಾ ಕೇಂದ್ರದ ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಲು ಅವಕಾಶ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ತಿಳಿಸಲಾಗಿದೆ. ಸಾಮಾಜಿಕ ಅಂತರ ಹಿನ್ನೆಲೆಯಲ್ಲಿ ಪ್ರೇಕ್ಷಕರ ಗ್ಯಾಲರಿಗೆ ಈ ಬಾರಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ. ಸಭಾಂಗಣದ ಆಸನಗಳ ಮಧ್ಯೆ ಪಾರದರ್ಶಕ ಶೀಟ್ ಹಾಕಿ ವಿಭಜಿಸಲಾಗಿದೆ ಎಂದು ಹೇಳಿದರು.
ಹೃದಯ ಚೆನ್ನಾಗಿ ಕೆಲಸ ಮಾಡ್ಬೇಕು ಅಂದ್ರೆ ಬಾದಾಮಿ ತಿನ್ಬೇಕಂತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
