ಬೆಂಗಳೂರು:ಸೆರೆಮನೆಗೆ ಕರೊನಾ ಸೋಂಕು ಹಡುವಿಕೆಗೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಕೈದಿಗಳಿಗೆ ಲಸಿಕೆ ಅಭಿಯಾನವನ್ನು ರಾಜ್ಯ ಬಂದಿಖಾನೆ ಇಲಾಖೆ ಕೈಗೊಂಡಿದ್ದು, 50 ಸಾವಿಕ್ಕೂ ಹೆಚ್ಚು ಕೈದಿಗಳು ಲಸಿಕೆ ಪಡೆಯಲಿದ್ದಾರೆ.
ಈ ಕುರಿತು ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಬಂದೀಖಾನೆ ಇಲಾಖೆಯ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಮೋಹನ್​, ಜೈಲುಗಳಿಗೆ ಸಜಾ ಮತ್ತು ವಿಚಾರಣಾಧಿನ ಕೈದಿಗಳಿಗೆ ಕರೊನಾ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಜೈಲು ಸೇರಿದಂತೆ ಎಲ್ಲ ಕಾರಾಗೃಹಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಜೈಲುಗಳಲ್ಲಿ 50 ಸಾವಿರಕ್ಕೂ ಹೆಚ್ಚಿನ ಕೈದಿಗಳು ಇದ್ದಾರೆ. ಮೊದಲ ಹಂತದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ 45 ವರ್ಷ ಮೇಲ್ಪಟ್ಟ 2,500 ಕೈದಿಗಳು ಮೊದಲ ಡೋಸ್​ ಲಸಿಕೆ ಪಡೆದಿದ್ದಾರೆ. ಈಗ 18 ವರ್ಷ ಮೇಲ್ಪಟ್ಟ ಸಜಾ ಬಂಧಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದರು.
ಸ್ಥಳಿಯ ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಸಹಕಾರದಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದು ಅಲೋಕ್​ ಮೋಹನ್​ ತಿಳಿಸಿದ್ದಾರೆ. ಲಸಿಕೆ ಲಭ್ಯತೆ ಮೇರೆಗೆ ಪ್ರತಿ ದಿನ ಇಂತಿಷ್ಟು ಕೈದಿಗಳಿಗೆ ಲಸಿಕೆ ಹಾಕಲಾಗುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲ 50 ಸಾವಿರ ಕೈದಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
1200 ಕೋಟಿ ರೂ ಪರಿಹಾರ ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ರಾ?: ಹುಬ್ಬಳ್ಳಿಯಲ್ಲಿ ಡಿಕೆಶಿ ವಾಗ್ದಾಳಿ

“ಜೂನ್​ ತಿಂಗಳಲ್ಲಿ 10 ಕೋಟಿ ಡೋಸ್ ಕೋವಿಶೀಲ್ಡ್​ ಪೂರೈಕೆ”

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − twelve =
Remember me
