ಬೆಂಗಳೂರು:ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೋವಿಡ್ ನಿಯಂತ್ರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ (ಪೀಕ್) ತಲುಪಬಹುದು. ಮೇ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು. ಹೆಚ್ಚು ಪ್ರಕರಣ ಕಂಡುಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಇವೆಲ್ಲವನ್ನೂ ವರದಿ ರೂಪದಲ್ಲಿ ನೀಡಲು ಸೂಚಿಸಲಾಗಿದೆ. ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಸಮರ್ಪಕವಾಗಿ ಚರ್ಚಿಸಲಾಗುವುದು. ಇದನ್ನು ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಇದನ್ನೂ ಓದಿ:ಕೆಲಸದ ಒತ್ತಡ ತಾಳಲಾಗುತ್ತಿಲ್ಲ… ಸಾಯದೇ ದಾರಿ ಇಲ್ಲ… ಡೆತ್​ನೋಟ್​ ಬರೆದು ಬ್ಯಾಂಕ್​ ಮ್ಯಾನೇಜರ್​ ಆತ್ಮಹತ್ಯೆ
ಖಾಸಗಿ ಆಸ್ಪತ್ರೆಗಳು ಕೂಡ ಸರ್ಕಾರೊಂದಿಗೆ ಕೆಲಸ ಮಾಡಿವೆ. ಟೆಲಿ ಐಸಿಯು ವ್ಯವಸ್ಥೆ ಮೊದಲಿಗೆ ನಮ್ಮ ಸರ್ಕಾರ ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಯಾವುದೇ ಸಲಹೆ ನೀಡುವುದಿಲ್ಲ, ಆದರೆ ಗುಂಪುಗೂಡದಂತೆ ಕ್ರಮ ವಹಿಸಬೇಕೆಂದು ತಜ್ಞರು ಹೇಳಿದ್ದಾರೆ ಎಂದರು.
ಪ್ರಧಾನಿ ಮೆಚ್ಚುಗೆ:ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿ, ಕರ್ನಾಟಕ ಸರ್ಕಾರದ ಕೋವಿಡ್ ನಿಯಂತ್ರಣ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮ್ರೈಕೋ ಕಂಟೇನ್ಮೆಂಟ್ ಜೋನ್ ಹೆಚ್ಚಿಸಲು ಸಲಹೆ ನೀಡಿದ್ದಾರೆ. ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.
ಶಾಕಿಂಗ್ : ಯುವಕನ ಮರ್ಮಾಂಗವನ್ನು ಕತ್ತರಿಸಿದ ತೃತೀಯಲಿಂಗಿಗಳು

ನಾಳೆಯಿಂದ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ; ಯಾವ್ಯಾವ ಜಿಲ್ಲೆಗೆ ಎಷ್ಟು ದಿನ ಅನ್ವಯ? ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
