ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಇಬ್ಬರು ಮಹಿಳೆಯರು ಸೇರಿದಂತೆ 17 ಹೊಸ ಕರೊನಾ ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿದ್ದು, ಈ ಪೈಕಿ 75 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಕರೊನಾ ವೈರಸ್‌ಗೆ ರಾಜ್ಯದಲ್ಲಿ ಇದುವರೆಗೆ 11 ಮಂದಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಒಂದೇ ದಿನಕ್ಕೆ 8 ಸೋಂಕಿತರು ಪತ್ತೆಯಾಗಿದ್ದಾರೆ. ಇದನ್ನು ಹೊರತುಪಡಿಸಿದರೆ ಮೈಸೂರಿನಲ್ಲಿ ಇಬ್ಬರು,, ಬೆಂಗಳೂರು ನಗರ ಮತ್ತು ವಿಜಯಪುರದಲ್ಲಿ ತಲಾ ಇಬ್ಬರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಬಾಗಲಕೋಟೆ, ಕಲಬುರಗಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಭಾರತದಲ್ಲಿ ಕರೊನಾ ಸೋಂಕಿತರ ಸಂಖ್ಯೆ 10,000ದ ಗಡಿದಾಟಿದ್ದು ಎಷ್ಟನೇ ದಿನ?- ಪರಿಣಾಮಕಾರಿಯಾಗಿ ಸೋಂಕು ಹರಡದಂತೆ ತಡೆಯುತ್ತಿದೆಯೇ ಭಾರತ?!

https://www.vijayavani.net/man-uses-dating-flyers-to-find-germ-free-girlfriend/
ಒಂದೇ ಒಂದು ಆ್ಯಪಲ್​ – 2 ಕೋಟಿ ಪರಿಹಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
