ಚಿಕ್ಕಬಳ್ಳಾಪುರ:ಕೇಂದ್ರದಿಂದ ಮುಂದಿನ ವಾರದಲ್ಲಿ ಹನ್ನೆರಡೂ ವರೆ ಲಕ್ಷ ಕರೊನಾ ಲಸಿಕೆ ಪೂರೈಕೆಯ ಭರವಸೆ ಸಿಕ್ಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಆವುಲನಾಗೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕರೊನಾ ಲಸಿಕೆಯ ಯಾವುದೇ ಕೊರತೆ ಇಲ್ಲ. ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೆ ಸೋಂಕಿನ ನಿಯಂತ್ರಣ ಮತ್ತು ಲಸಿಕೆಯ ಬಗ್ಗೆ ಮಾತುಕತೆ ನಡೆಸಲಾಗಿದೆ. ಇದೇ ವೇಳೆ ಮುಂದಿನ ವಾರದಲ್ಲಿ ಹನ್ನೆರಡೂ ವರೆ ಲಕ್ಷ ಕರೊನಾ ಲಸಿಕೆ ಪೂರೈಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಬುಧವಾರ 4 ಲಕ್ಷ ಡೋಸ್ ವಿಮಾನದ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕರೊನಾ ಲಸಿಕೆ ಸಿಗಲಿದೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ. ಇದಕ್ಕೆ ಆರೋಗ್ಯ ಸೇತು ಸೇರಿ ಇತರೆ ವಿಧಾನದ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಎರಡನೇ ಅಲೆ ಆತಂಕ ಕಾಡುತ್ತಿದೆ. ಇದಕ್ಕೆ ಈಗಾಗಲೇ ಬಿಗಿ ಕ್ರಮಗಳನ್ನು ಕೈಗೊಂಡಿದ್ದು ಸೋಂಕಿನ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಕನಿಷ್ಠ ಎರಡು ತಿಂಗಳು ಯಾವುದೇ ಸಭೆ ಸಮಾರಂಭ, ಜನ ಸಂದಣಿಯಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
