ರಾಜ್ಯದಲ್ಲಿಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದು ಬಳಿಕ ಕಾಂಗ್ರೆಸ್ ಸರ್ಕಾರದಿಂದ ರದ್ದುಗೊಳಿಸಲಾಗಿದ್ದ ಗೋಹತ್ಯಾ ನಿಷೇಧ ಕಾಯ್ದೆಯನ್ನು ಮತ್ತೆ ಜಾರಿಗೆ ತರುವುದು. ಜತೆಗೆ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ಕಾನೂನು ರೂಪಿಸುವುದು ಸೇರಿ ಪ್ರಮುಖ ನಿರ್ಧಾರಗಳನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಸ್ತುತ ಎಲ್ಲೆಡೆ ಅಕ್ರಮ ಗೋಸಾಗಾಟ, ಗೋಹತ್ಯೆ ಹೆಚ್ಚಾಗುತ್ತಿದೆ, ಕೆಲವೊಂದು ಅಗತ್ಯ ಅಂಶಗಳನ್ನು ಪರಿಷ್ಕರಣೆ ಮಾಡಿ ಕಾಯ್ದೆಯನ್ನು ಮತ್ತೆ ಜಾರಿಗೊಳಿಸಬೇಕು ಎಂಬ ಸಲಹೆಯನ್ನು ಸರ್ಕಾರಕ್ಕೆ ನೀಡಲಾಗಿದೆ ಎಂದು ಕೋರ್ ಕಮಿಟಿ ಸದಸ್ಯ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮದುವೆಗಾಗಿ ಮತಾಂತರ ಪ್ರಕರಣ ಹತ್ತಿಕ್ಕಲೇಬೇಕಾಗಿದೆ. ಮುಂದೆ ಸರ್ಕಾರ ಹಾಗೂ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆ ಮಾಡಿ ಈ ಕುರಿತ ಕಾನೂನು ತರುವಂತೆ ಸಲಹೆ ನೀಡಲಾಗಿದೆ ಎಂದರು.
ನ.25ರಿಂದ ಡಿಸೆಂಬರ್ 5ರವರೆಗೆ ಮಹಾಶಕ್ತಿಕೇಂದ್ರದ ಮಟ್ಟದಲ್ಲಿ ಪ್ರಶಿಕ್ಷಣ ವರ್ಗ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಪಂ ಚುನಾವಣೆಗೆ ಪಕ್ಷ ಸನ್ನದ್ಧವಾಗಿದೆ, ಮಂಡಲಗಳಲ್ಲಿ ವಾರ್ ರೂಂ, ಕಾಲ್ ಸೆಂಟರ್ ಆರಂಭವಾಗಲಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕುಟುಂಬ ಮಿಲನ್ ಕಾರ್ಯಕ್ರಮ ನಡೆಸಿ ಕೇಂದ್ರ, ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗಕ್ಕೆ ನೀಡಿರುವ ಯೋಜನೆಗಳು, ಅನುದಾನದ ವಿವರ ನೀಡಲಾಗುವುದು ಎಂದರು.
ಲವ್​ಜಿಹಾದ್​ಗೂ ಕಾನೂನು
ಲವ್ ಜಿಹಾದ್ ಹೆಸರಲ್ಲಿ ಮತಾಂತರ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರೇಮ ಹಾಗೂ ಹಣದ ಆಮಿಷವೊಡ್ಡಿ ಮತಾಂತರಗೊಳಿಸುತ್ತಾರೆ ಎನ್ನುವ ಮಾಹಿತಿ ಇದೆ. ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ಡ್ರಗ್ಸ್ ಮಟ್ಟ ಹಾಕಲು ಸರ್ಕಾರ ದೃಢ ಹೆಜ್ಜೆ ಇರಿಸಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವಾಗಿಸಲು ಸರ್ಕಾರ ಬಿಗು ಕ್ರಮ ಕೈಗೊಳ್ಳಲಿದೆ ಎಂದು ಬಿಎಸ್​ವೈ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
