ಚನ್ನಪಟ್ಟಣ:ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಕೆಲವೇ ತಿಂಗಳುಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್​, ಬಿಜೆಪಿ-ಜೆಡಿಎಸ್​ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಇದರ ನಡುವೆಯೇ ಮಾಜಿ ಸಚಿವ, ವಿಧಾನಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್​ ಅಭ್ಯರ್ಥಿ ಆಯ್ಕೆ ಕುರಿತು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಸಿ.ಪಿ. ಯೋಗೇಶ್ವರ್, ಎಚ್​.ಡಿ. ಕುಮಾರಸ್ವಾಮಿ ಅವರು ನನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸೂಚಿಸಿದ್ದಾರೆ. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ. ಕಳೆದ ವಾರ ನಾನು ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ಮಾಡಿದೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ಹೋಗುತ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ.
ಕಳೆದ ವಾರದಲ್ಲಿ ಡಿಸಿಎಂ ಡಿಕೆಶಿ ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರೋ ಸರ್ಕಾರಿ ಸಂತೆ. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರೋ ಕಾರ್ಯಕ್ರಮ. ಅಧಿಕಾರಿಗಳನ್ನ ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳ್ತಿದ್ದಾರೆ.
ಇದನ್ನೂ ಓದಿ:ಯುವ-ಶ್ರೀದೇವಿ ಡಿವೊರ್ಸ್​ ನಡುವೆಯೇ ಸೈಲೆಂಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ರಾ ವಿನಯ್​ ರಾಜ್​ಕುಮಾರ್​?!
ಜನರಿಗೆ ಮನೆ ಕೊಡುತ್ತೇನೆ, ಸೈಟ್ ಕೊಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ. ನಗರ ವ್ಯಾಪ್ತಿ ಬಿಟ್ಟರೆ ತಾಲೂಕಿನ ಬಹತೇಕ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆ ಟೈಮ್​ನಲ್ಲಿ ಮನೆ ಕೊಡ್ತೀವಿ ಅನ್ನೋದು ಸುಳ್ಳು. ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಡಿ.ಕೆ. ಶಿವಕುಮಾರ್​ ಅವರು ತಮ್ಮ ರಾಜಕೀಯ ಜೀವನವನ್ನು ಚನ್ನಪಟ್ಟಣದಿಂದ ಆರಂಭಿಸಿದ್ರು ಅವರ ಕೊಡುಗೆ ಏನು ಇಲ್ಲ. 40 ವರ್ಷದ ಅವಧಿಯಲ್ಲಿ ಅವರ ಕೊಡುಗೆ ಶೂನ್ಯ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಜಾತ್ರೆ ಮಾಡ್ತಿದ್ದಾರೆ. ಪ್ರೋಟೋಕಾಲ್ ಫಾಲೋ ಮಾಡಲಿಲ್ಲ ಅಂದ್ರೆ ಮೈತ್ರಿ ನಾಯಕರು ಮುಂದಿನ ಕಾರ್ಯಕ್ರಮಗಳಿಗೆ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಸಚಿವ, ವಿಧಾನಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್​ ಎಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
