ರಾಮನಗರ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಗಾಳಿ ಸುದ್ದಿಯ ನಡುವೆಯೇ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ಹೇಳಿಕೆ ಈ ವಿಚಾರಕ್ಕೆ ಇಂಬು ನೀಡಿದೆ.
ರಾಮನಗರದಲ್ಲಿ ಈ ಕುರಿತು ಮಾತನಾಡಿದ ಸಿಪಿವೈ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಭೇಕಿದೆ. ಒಂದಷ್ಟು ರಾಜಕೀಯ ಬದಲಾವಣೆಯ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ.
ಇದನ್ನೂ ಓದಿ:ಪರಮೇಶ್ವರ್​ ಗೃಹ ಖಾತೆಯನ್ನು ಪ್ರಿಯಾಂಕ ಖರ್ಗೆಗೆ ಲೀಸ್​ ಕೊಟ್ಟಿದ್ಧಾರೆ: ನಳಿನ್​ ಕುಮಾರ್​ ಕಟೀಲ್​
ಈ ನಿಟ್ಟಿನಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಈ ವಿಚಾರವಾಗಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಂದಾಣಿಕೆ ಆಗಬಹುದು ಎಂದು ಮಾರ್ಮಿಕವಾಗಿ ನುಡಿದಿದ್ಧಾರೆ.
ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನಿಸುತ್ತಾರೆ. ಹೈಕಮಾಂಡ್​ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − nine =
Remember me
