ಬೆಂಗಳೂರು:‘ಅಮಿತ್ ಶಾ ಒಂಥರಾ ರೌಡಿ ರೀತಿ. ನಾನೇ ಸಿಎಂ ಆದರೂ ಆದೆ…’ ಎಂದು ಎಂಎಲ್ಸಿ ಸಿ.ಪಿ.ಯೋಗೇಶ್ವರ್​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆದ ಬೆನ್ನಲ್ಲೇ ಮತ್ತೊಂದು ಚರ್ಚೆ ಶುರುವಾಗಿದೆ.
ಯೋಗೇಶ್ವರ್​ ಕಾಂಗ್ರೆಸ್​ ಬಾಗಿಲು ತಟ್ಟಲು ಸಿದ್ಧವಾಗಿದ್ದು, ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿರುವ ಹಿನ್ನೆಲೆಯಲ್ಲಿಯೇ ಅದಕ್ಕೆ ಪೂರಕ ವಾತಾವರಣ ಸೃಷ್ಟಿ ಮಾಡಲು ತಾವೇ ಆಡಿಯೋ ಲೀಕ್​ ಮಾಡಿದ್ದಾರೆ ಎನ್ನುವ ನಿಟ್ಟಿನಲ್ಲಿ ರಾಜಕೀಯ ಚರ್ಚೆಗಳು ತಾರಕಕ್ಕೇರಿವೆ.
ಬಿಜೆಪಿಯಲ್ಲಿ ಭವಿಷ್ಯ ಕಟ್ಟಿಕೊಳ್ಳಲು ಹೋರಾಟ ನಡೆಸಿದ ಯೋಗೇಶ್ವರ್​ಗೆ ಅಲ್ಲಿ ಸಂಕಷ್ಟ ಎದುರಾಗಿರುವ ಕಾರಣ, ಕಾಂಗ್ರೆಸ್​ ಕಡೆಗೆ ಒಲವು ತೋರಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಮೃದು ಧೋರಣೆ ಹೊಂದಿರುವ ಅವರು, ಕಾಂಗ್ರೆಸ್​ಗೆ ಹತ್ತಿರವಾಗುತ್ತಿದ್ದಾರೆ ಎನ್ನುವ ಚರ್ಚೆಗಳು ಹಳೇ ಮೈಸೂರು ಭಾಗದ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.
ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಜನಾಭಿಪ್ರಾಯದ ಮೂಲಕ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್​ ಷಾ ಒಂಥರಾ ರೌಡಿ ರೀತಿ. ದೇವೇಗೌಡರು ಅಂಡರ್​ ಸ್ಟ್ಯಾಂಡಿಗ್​ ರಾಜಕೀಯ ಮಾಡ್ತಾರೆ ಎನ್ನುವ ಮಾತುಗಳು ಬಿಜೆಪಿ ಬಗ್ಗೆ ಇರುವ ಅಸಮಾಧಾನಕ್ಕೆ ಹಿಡಿದ ಕನ್ನಡಿಯಾಗಿದೆ.
ಯೋಗೇಶ್ವರ್​ ಬಿಜೆಪಿ ತೊರೆಯುವುದಕ್ಕೆ ನೆಪ ಹುಡುಕಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಮುಂದೆ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕು.
ಅಮಿತ್ ಶಾ ಒಂಥರಾ ರೌಡಿ ಇದ್ದಂಗೆ, ನಾನೇ ಸಿಎಂ ಆದ್ರೂ ಆದೆ: ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ ಸಿಪಿವೈ ಹೇಳಿಕೆ

ಭಾರತೀಯರು ಸೇರಿ ಒಟ್ಟು 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನೇಪಾಳದಲ್ಲಿ ಪತನ: 36ಕ್ಕೇರಿದ ಸಾವಿನ ಸಂಖ್ಯೆ

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
