ರಾಮನಗರ:ನಾನು ಕಾಣದಿರೋ ಬಿಜೆಪಿ ಪಕ್ಷನಾ… ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು. ಹಾಗಾಗಿ ನನ್ನನ್ನು ಏನೂ ಮಾಡಲು ಬಿಜೆಪಿ ಆಗಲ್ಲ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ನಿನ್ನೆ ಸಂಜೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ನಾಲಗೆ ಹರಿಬಿಟ್ಟಿದ್ದ ಸಿ.ಪಿ‌.ಯೋಗೇಶ್ವರ್, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಕುಮಾರಸ್ವಾಮಿ ಬಂದಾಗ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹಲ್ಲುಗಿಂಜುತ್ತಾರೆ. ಅವನಿಗೆ ಹೂವಿನ ಹಾರ ಹಿಡ್ಕೊಂಡು ಹೋಗ್ತಾರೆ. ಆದರೆ ಅವನು ಅಧಿಕಾರದಲ್ಲಿದ್ದಾಗ ಯಾರಿಗೆ ಅಧಿಕಾರ ಕೊಟ್ಟಿದ್ದಾನೆ? ಎಂದೆಲ್ಲ ಕಿಡಿಕಾರಿದ್ದರು. ಈ ಹೇಳಿಕೆ ಕುರಿತು ಖಾರವಾಗಿಯೇ ತಿರುಗೇಟುಕೊಟ್ಟ ಎಚ್​ಡಿಕೆ, ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು. 2006ರಲ್ಲಿ ಎಲ್ಲ ಮಂಗನ ತರಹ ಹಾರಲು ರೆಡಿಯಾಗಿದ್ದರು. ಅವತ್ತು ಬಿಜೆಪಿಯನ್ನ ಉಳಿಸಿದ್ದು ನಾನು. ಇದೇ ಯಡಿಯೂರಪ್ಪ ಅರ್ಜಿ ಹಾಕಿಕೊಂಡು ನನ್ನತ್ತಿರ ಬಂದಿದ್ದರು. ನನಗೆ ಮಂತ್ರಿ ಮಾಡಿ ಬಿಜೆಪಿಗೆ ರಾಜೀನಾಮೆ ಕೊಡ್ತೀನಿ ಅಂತಾ ಅಂದಿದ್ದರು ಎಂದು ವಿವರಿಸಿದರು.ಇದನ್ನೂ ಓದಿರಿಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ
ರಾಮನಗರ ಜಿಲ್ಲೆಯಲ್ಲಿ ನನ್ನನ್ನು ಖಾಲಿ ಮಾಡಿಸಲು ಎಲ್ಲಾ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಕೊಡುಗೆ ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಹೊಡೆದಿಲ್ಲ, ಜನರ ಹಣ ಲೂಟಿ ಮಾಡಿಲ್ಲ. ನನ್ನನ್ನು ಖಾಲಿ ಮಾಡಿಸಲು ಬಂದವರು ಅವರೇ ಖಾಲಿಯಾಗಿದ್ದಾರೆ. ರಾಮನಗರ-ಚನ್ನಪಟ್ಟಣಕ್ಕೆ ಮಾಡಿರುವ ಅಭಿವೃದ್ಧಿ ಜನರಿಗೆ ಗೊತ್ತಿದೆ. ನಾನು ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆ ಬಗ್ಗೆಯೂ ಗೊತ್ತಿದೆ ಎಂದು ಎಚ್​ಡಿಕೆ ಹೇಳಿದರು.
ಜನರಿಂದ ತಲೆ ಹೊಡೆದ ಹಣದಲ್ಲಿ ಆತ ಮಂತ್ರಿಯಾಗಿದ್ದಾನೆ. ಯಡಿಯೂರಪ್ಪ ಮತ್ತು ಆರ್​ಎಸ್​ಎಸ್​ ನಾಯಕರನ್ನು ಮೆಚ್ಚಿಸಲು ಹಾಗೆಲ್ಲ ಮಾತನಾಡ್ತಿದ್ದಾನೆ. ನನ್ನನ್ನು ಬೈಕೊಂಡು ಹೊಟ್ಟೆಪಾಡು ನೋಡಿಕೊಳ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡೋಕೆ ಆಗಲ್ಲ. ನಾನು ಈ ಮಣ್ಣಿನ ಮಗ, ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ. ರಾಮನಗರ ಜಿಲ್ಲೆ ಯಾರ ಸ್ವತ್ತಲ್ಲ ಎಂದು ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನೀನು ನನ್ನ ಮುಂದೆ ಇನ್ನೂ ಬಚ್ಚಾ ಇದೀಯಾ. ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡಬೇಡ. ನಿನಗಿಂತಲೂ ಚೆನ್ನಾಗಿ ಮಾತನಾಡಲು ನನಗೂ ಬರುತ್ತೆ. ಸಚಿವ ಆಗಿದ್ದೀಯಾ ಕೆಲಸ ಮಾಡಿಕೊಂಡು ಹೋಗು. ನನ್ನ ವಿರುದ್ಧ ಮಾತನಾಡಿ ಲೀಡರ್ ಆಗುವ ಪ್ರಯತ್ನ ಬೇಡ ಎಂದು ಸಿಪಿವೈಗೆ ಎಚ್ಚರಿಕೆ ಕೊಟ್ಟ ಎಚ್​ಡಿಕೆ, ಯಾರೋ ಅಡವಿಟ್ಟ ಇಸ್ಪೀಟು ದುಡ್ಡಲ್ಲಿ ಮಂತ್ರಿಯಾಗಿದ್ದಾನೆ. ಇವನು ನನ್ನ ಬಗ್ಗೆ ಏನು ಮಾತನಾಡಲು ಸಾಧ್ಯ? ಎಂದು ಲೇವಡಿ ಮಾಡಿದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಅವನು ಬಂದಾಗ ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ… ಎಚ್​ಡಿಕೆ ವಿರುದ್ಧ ನಾಲಗೆ ಹರಿಬಿಟ್ಟ ಯೋಗೇಶ್ವರ್​

ಶಿವರಾತ್ರಿ ಪ್ರಯುಕ್ತ ಕ್ರಿಕೆಟ್ ಟೂರ್ನಿ: ಗೆದ್ದವರಿಗೆ ಸಿಗುತ್ತೆ ಜೋಡಿಕುರಿ ಜತೆಗೆ ವಿಸ್ಕಿ ಬಾಟಲಿ…

Video| ದೇವರ ಹೆಸರಲ್ಲಿ ಬೆತ್ತಲೆ ಸೇವೆ! ನಡುರಸ್ತೆಯಲ್ಲಿ ಬೆತ್ತಲೆ ಮಹಿಳೆಯ ಮೆರವಣಿಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + five =
Remember me
