ಬೆಂಗಳೂರು:ಕರ್ನಾಟಕವೆಂದು ನಾಮಕರಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ಅಮ್ಮನ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಎಂದರು.
ಇದನ್ನೂ ಓದಿ:ಹಾಡಹಗಲೇ ಸದ್ದು ಮಾಡಿದ ಗನ್! ಗುಂಡಿನ ದಾಳಿಗೆ ಇಬ್ಬರು ಯುವಕರು ಬಲಿ
“ರಾಜ್ಯದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ. ಇದನ್ನು ನಾವು – ನೀವು ಎಲ್ಲರೂ ಜೊತೆಗೂಡಿ ಮಾಡೋಣ. ಪ್ರತಿಯೊಬ್ಬರೂ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು, ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ” ಎಂದು ಹೇಳಿದರು.
“ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ. ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಇಲ್ಲಿ ಬಂದು ಬದುಕು ಕಟ್ಟಿಕೊಂಡವರೂ ಕೂಡ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿನ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು” ಎಂದರು.
ಇದನ್ನೂ ಓದಿ:ಬೆಂಗಳೂರಿನಲ್ಲಿ ಭಾರತ​ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ ಆತ್ಮಹತ್ಯೆಗೆ ಶರಣು
“ಭುವನೇಶ್ವರಿ ತಾಯಿ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ. ನವೆಂಬರ್ 01, 2024ರೊಳಗೆ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ. ಇದೊಂದು ಉತ್ತಮವಾದ ಕೆಲಸ. ವಿಧಾನಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರವಿರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ” ಎಂದರು.
ಕರ್ನಾಟಕವೆಂದು ನಾಮಕರಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ಅಮ್ಮನ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದೆ.
ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು…pic.twitter.com/b67nHtbUla
— Siddaramaiah (@siddaramaiah)June 20, 2024

“ನವೆಂಬರ್ 01 2023ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳ ತುಂಬಿವೆ. ಈ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯವನ್ನು ಇಟ್ಟುಕೊಂಡು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01, 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು” ಎಂದು ಹೇಳಿದರು.
ಇದನ್ನೂ ಓದಿ:ಟಿ20 ವಿಶ್ವಕಪ್ 2024: ವೆಸ್ಟ್ ಇಂಡೀಸ್‌ನಿಂದ ಸ್ಟಾರ್ ಬ್ಯಾಟರ್ ಔಟ್​! ತಲೆಕೆಡಿಸಿಕೊಂಡ ಕ್ಯಾಪ್ಟನ್​ ಹೇಳಿದ್ದಿಷ್ಟು
“ದೇವರಾಜ ಅರಸು ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು. ತಾಯಿ ಭುವನೇಶ್ವರಿಯ ಪೂಜೆ ಬಹಳ ವರ್ಷಗಳಿಂದ ರಾಜಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ, ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.
ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
