ಉಡುಪಿ:ದೇಶ, ರಾಜ್ಯ ಮಾತ್ರವಲ್ಲದೆ ಉಡುಪಿ ಜಿಲ್ಲೆಯಲ್ಲೂ ಕಳೆದ ಕೆಲವು ತಿಂಗಳುಗಳಿಂದ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣ ಮೇಲಿಂದ ಮೇಲೆ ನಡೆಯುತ್ತಿದ್ದು, ಇಂದು ಕ್ರಿಕೆಟಿಗರೊಬ್ಬರು ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ.
ಉಡುಪಿಯ ಉದ್ಯಾವರದ ಪಿತ್ರೋಡಿಯ ಮಲ್ಲೇಶ್​ (40) ಸಾವಿಗೀಡಾದ ವ್ಯಕ್ತಿ. ಕ್ರಿಕೆಟಿಗರೂ ಆಗಿರುವ ಇವರು ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್​. ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡ ಇವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಿಕೊಳ್ಳುವ ಪ್ರಯತ್ನ ನಡೆಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಇದನ್ನೂ ಓದಿ:ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು
ಉಡುಪಿಯ ಬನ್ನಂಜೆಯಲ್ಲಿ ಸಿಎ ಆಫೀಸ್ ಹೊಂದಿದ್ದ ಇವರು, ಚಾರ್ಟರ್ಡ್​ ಅಕೌಂಟೆಂಟ್​ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಯಲ್ಲೂ ಇದ್ದರು. ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷ, ವಿಎಸ್​ಸಿ ಬ್ಲಡ್ ಫಾರ್ ಲೈಫ್ ರಕ್ತದಾನ ಸಂಘದ ಸದಸ್ಯರೂ ಆಗಿದ್ದ ಇವರು ರಕ್ತದಾನ ಮಾಡುವ ಮೂಲಕ ಹಲವರನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ:ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ; ಕುಸಿದು ಬಿದ್ದು ಸಾವು
ವೆಂಕಟರಮಣ ಕ್ರಿಕೆಟರ್ಸ್ ನೇತೃತ್ವದ ತಂಡದಲ್ಲಿ ಪ್ರಮುಖ ಆಟಗಾರರಾಗಿ ಜಿಲ್ಲೆ ಹಾಗೂ ರಾಜ್ಯ-ರಾಷ್ಟ್ರಮಟ್ಟದ ಹಲವು ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗಿಯಾಗಿ, ಪ್ರಶಸ್ತಿ ಗಳಿಸಿದ್ದರು. ಇವರು ಪತ್ನಿ, ಇಬ್ಬರು ಮಕ್ಕಳು, ತಂದೆ-ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮೇಕಪ್​ನಿಂದಾಗಿ ಬಣ್ಣಗೆಟ್ಟಿತು ವಧುವಿನ ಮುಖ; ಮದುವೆಯೇ ಬೇಡ ಎಂದ ವರ

ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 17 =
Remember me
