ತುರುವೇಕೆರೆ:ತಿಪ್ಪೆಗೆ ಸಗಣಿ ಹಾಕಲು ತೆರಳಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದ್ವಾರನಹಳ್ಳಿಯಲ್ಲಿ ಶನಿವಾರ ನಡೆದಿದೆ.
ಇದನ್ನೂ ಓದಿ:ಬೆಂಗಳೂರು-ಮದುರೈ ಸೇರಿ 3 ಹೊಸ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ, ರೈಲಿನ ವೇಳಾಪಟ್ಟಿ ಇಲ್ಲಿದೆ
ವಿದ್ಯಾರ್ಥಿ ಸಾಗರ್(16) ಮೃತ ಯುವಕ. ಮೃತ ವಿದ್ಯಾರ್ಥಿ ದ್ವಾರನಹಳ್ಳಿಯ ರವಿಕುಮಾರ್ ಮತ್ತು ಮನು ಎಂಬುವವರ ಪುತ್ರ. ಪಟ್ಟಣದ ಜೆಪಿ ಆಂಗ್ಲ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ.
ತನ್ನ ತಂದೆ ರವಿಕುಮಾರ್ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿದ್ದರು. ಆ ವೇಳೆ ಮನೆಯಲ್ಲಿದ್ದ ಸಗಣಿಯನ್ನು ತನ್ನ ತಾಯಿಯ ಜೊತೆಗೆ ತೆರಳಿ ತಿಪ್ಪೆಗೆ ಹಾಕಲು ತೆರಳಿದ್ದ. ಆ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದನ್ನು ಕಾಣದೇ ಸಾಗರ್ ತುಳಿದಿದ್ದಾನೆ. ತಕ್ಷಣವೇ ಸಾಗರ್ ಕೆಳಗೆ ಬಿದ್ದು ಕೊನೆಯುಸಿರೆಳೆದನೆಂದು ಹೇಳಲಾಗಿದೆ. ಅಲ್ಲೇ ಇದ್ದ ತಾಯಿ ಮನು ರವರು ಕೂದಲೆಳೆ ಅಂತರದಿಂದ ಪಾರಾದರೆಂದು ತಿಳಿದುಬಂದಿದೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ಕುರಿತು ಬೆಸ್ಕಾಂನ ಲೈನ್​ಮೆನ್ ಸೇರಿದಂತೆ ಶಾಖಾ ವ್ಯವಸ್ಥಾಪಕರಿಗೂ ತಿಳಿಸಲಾಗಿತ್ತು. ಆದರೂ ಸಹ ಬೆಸ್ಕಾನ ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ ತಾಳಿದ ಕಾರಣ ಅಮಾಯಕ ಜೀವ ಬಲಿಯಾಗಿದೆ ಎಂದು ದ್ವಾರನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ವಿದ್ಯಾರ್ಥಿ ಸಾಗರ್​ ಶವವನ್ನು ನೋಡಲು ಆಗಮಿಸಿದ ಶಾಸಕ ಎಂ.ಟಿ.ಕೃಷ್ಣಪ್ಪನವರು ಶವ ಕಂಡು ಕೆಲ ಕಾಲ ಗದ್ಗತಿತರಾದರು. ವಿದ್ಯುತ್ ತಂತಿ ತುಂಡಾಗಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಅವರನ್ನು ಕೂಡಲೇ ಅಮಾನತಿನಲ್ಲಿಡಬೇಕೆಂದು ಬೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಶೇಖರ್ ರವರಿಗೆ ಸೂಚನೆ ನೀಡಿದರು.
ವಿದ್ಯಾರ್ಥಿ ಸಾಗರ್ ಬೆಸ್ಕಾಂ ನ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರವನ್ನು ಬೆಸ್ಕಾಂ ನಿಂದ ಕೊಡಿಸಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಲು ರಾಹುಲ್ ಗಾಂಧಿ ಬರಲಿ: ಪ್ರಲ್ಹಾದ್​ ಜೋಶಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:9 + nineteen =
Remember me
