ಬೆಂಗಳೂರು: ಜ್ಞಾನಭಾರತಿ ಸಮೀಪದ ಸೊನ್ನೇನ ಹಳ್ಳಿಯಲ್ಲಿ ಮಂಗಳವಾರ ಸಂಜೆ ಮುಂಗುಸಿಗೆ ಹಾರಿಸಿದ ಗುಂಡು ಆಟವಾಡುತ್ತಿದ್ದ ಬಾಲಕನಿಗೆ ತಗುಲಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಸೊನ್ನೇನಹಳ್ಳಿಯ ನಿವಾಸಿ ಆಸೀಫ್ (12) ಗಾಯಗೊಂಡ ಬಾಲಕ. ಫೈರಿಂಗ್ ಮಾಡಿದ ಆರೋಪಿ ಕುಮಾರ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.
ಮುಂಗುಸಿಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ತನ್ನ ಬಂದೂಕು ತಂದ ಕುಮಾರ್, ಮುಂಗುಸಿಗೆ ಗುಂಡು ಹೊಡೆದಿದ್ದಾನೆ. ಗುಂಡು ಕಲ್ಲಿಗೆ ಬಿದ್ದು ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಸೀಫ್ ದೇಹಕ್ಕೆ ತಗುಲಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಅದನ್ನು ಗಮನಿಸಿದ ಕುಮಾರ್, ಬಾಲಕನ ಪಾಲಕರಿಗೆ ಮಾಹಿತಿ ನೀಡಿದ್ದ. ಗುಂಡಿನ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ತನ್ನನ್ನು ಬಂಧಿಸಬಹುದೆಂಬ ಭಯದಿಂದ ಕುಮಾರ್ ತಲೆಮರೆಸಿಕೊಂಡಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಜಡ್ಜ್​ಗಳ ವಸತಿಗೃಹದಲ್ಲಿ ಕಳವು
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ಬಂದೂಕಿಗೆ ಪರವಾನಗಿ ಹೊಂದಿದ್ದನೇ ಎಂಬ ಬಗ್ಗೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕುಮಾರ್ ಮತ್ತು ಬಾಲಕ ಆಸೀಫ್ ನೆರೆಹೊರೆಯವರಾಗಿದ್ದು, ಎರಡೂ ಕುಟುಂಬಗಳು ಅನ್ಯೋನ್ಯವಾಗಿದ್ದವು ಎನ್ನಲಾಗಿದೆ.
ಗೋಹತ್ಯೆ ತಡೆಗೆ ಒಂದಡಿ ಮುಂದಿರಿಸಿತು ಯೋಗಿ ಸರ್ಕಾರ: ಕಠಿಣ ಶಿಕ್ಷೆ ಎಂಥವರನ್ನೂ ಹಿಮ್ಮೆಟ್ಟಿಸೀತು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − three =
Remember me
