ಕೊಪ್ಪಳ:ಡ್ರೈವರ್ ಒಬ್ಬ ಹಣಕ್ಕಾಗಿ ತನ್ನ ಮಾಲೀಕನ ಮಗನನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಜ್ಬಲ್(15) ಕೊಲೆಯಾದ ಬಾಲಕ. ಕುಕನೂರು ಪಟ್ಟಣ ನಿವಾಸಿ ಶಂಕರ್ ಆರೋಪಿ.ಇದನ್ನೂ ಓದಿ:4 ತಿಂಗಳ ಮಗುವಿನ ಪಕ್ಕ ಹೆಡೆ ಬಿಚ್ಚಿದ ವಿಷ ಸರ್ಪ; ಕಂದಮ್ಮನ ಪ್ರಾಣ ಉಳಿಸಲು ತಾಯಿ ಮಾಡಿದ್ದೇನು?
ಆರೋಪಿ ಶಂಕರ್ ಅಪ್ರಾಪ್ತ ವಯಸ್ಸಿನ ಬಾಲಕರಿಗೆ ಸಿಗರೇಟ್ ಸೇದಿಸಿ, ಮದ್ಯ ಕುಡಿಸಿ ವಿಡಿಯೋ ಮಾಡುತ್ತಿದ್ದ. ಬಳಿಕ ಅವರನ್ನು ಬೆದರಿಸಿ ಹಣಕ್ಕಾಗಿ ಪೀಡಿಸುತ್ತಿದ್ದ. ಇದೇ ಕೃತ್ಯವನ್ನು ತನ್ನ ಮಾಲೀಕನ ಮಗನ ಮೇಲೂ ಎಸಗಿದ್ದ. ಕೊನೆಗೆ ಹಣ ನೀಡಲು ಹಿಂದೇಟು ಹಾಕಿದ್ದರಿಂದ ಪ್ರಜ್ವಲ್​ನನ್ನು ಬಾವಿಯಲ್ಲಿ ಮುಳುಗಿಸಿ ಶಂಕರ್ ಕೊಲೆ ಮಾಡಿದ್ದಾನೆ. ಬಳಿಕ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಮನೆಯವರಿಗೆ ತಿಳಿಸಿದ್ದ.
ಕೊಲೆ‌ ಮಾಡಿರುವುದನ್ನು ಗಮನಿಸಿದ್ದ ಪ್ರತ್ಯಕ್ಷದರ್ಶಿಗಳಿಗೆ ಶಂಕರ್ ಬೆದರಿಕೆ ಹಾಕಿದ್ದ. ಬಳಿಕ ತನ್ನ ಕಾರಿನ ಮಾಲೀಕನಿಗೆ ಕರೆ ಮಾಡಿ, ನಿಮ್ಮ ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾನೆ. ಪುತ್ರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪಾಲಕರು ಪೊಲೀಸರ ಮೊರೆ ಹೋಗಿದ್ದರು.
ಇದನ್ನೂ ಓದಿ:ಎಕ್ಸ್​ಪ್ರೆಸ್​ ವೇಯಲ್ಲಿ ಮರವೇರಿ ಕುಳಿತ ಪೊಲೀಸರು; ಕಾರಣ ಇಷ್ಟೇ…
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಂಕರ್​ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆರಂಭದಲ್ಲಿ ಸಹಜ ಸಾವು ಎಂದು ಬಿಂಬಿಸಿದ್ದ ಶಂಕರ್, ಹಣ ನೀಡದಿರುವುದಕ್ಕೆ ಕೊಲೆ‌ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + twenty =
Remember me
