ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಂಬತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆದಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿದ್ದ ಪ್ರಕರಣವೂ ಸೇರಿದೆ.ಮೇಕೆದಾಟು ಪಾದಯಾತ್ರೆ ಹಾಗೂ ಇತರೆ ಕೆಲ ಪ್ರಕರಣಗಳನ್ನು ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಉಚ್ಛ ನ್ಯಾಯಾಲಯದ ಅನುಮತಿ ಪಡೆಯಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸಚಿವ ಸಂಪುಟ ಉಪ ಸಮಿತಿ ಶಿಫಾರಸು ಮಾಡಿತ್ತು. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು.ಕೋವಿಡ್ ಮಾರ್ಗಸೂಚಿ ಉಲ್ಲಂಸಿ ಪಾದಯಾತ್ರೆ ನಡೆಸಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಇತರ ನಾಯಕರ ಮೇಲೆ ತಹಸೀಲ್ದಾರರು ಪ್ರಕರಣ ದಾಖಲಿಸಿದ್ದರು.ಈ ಒಂಬತ್ತು ಪ್ರಕರಣದಲ್ಲಿ ಯಾವುದೇ ಕೋಮು ಗಲಭೆಯ ಪ್ರಕರಣ ಇಲ್ಲ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − 7 =
Remember me
